ಸುದ್ದಿಒನ್, ಚಿತ್ರದುರ್ಗ, ಜುಲೈ. 31 : ನಗರದ ಕಬೀರಾನಂದ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಶನಿವಾರ ಬಾದರದಿನ್ನಿ ಆಟ್ರ್ಸ್ ಅಕಾಡೆಮಿ ಹಾಗೂ ಕನ್ನಡ ಮತ್ತು ಸಂಸ್ಕøತಿ ನಿರ್ದೇಶನಾಲಯ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ "ಗಾನ-ಲಹರಿ" ವಚನ ಹಾಗೂ ಭಾವಗೀತೆಗಳ ತರಬೇತಿ ಕಾರ್ಯಗಾರ ಆಯೋಜಿಸಲಾಗಿದೆ.
ಕಬೀರಾನಂದ ಆಶ್ರಮದ ಶ್ರೀ ಶಿವಲಿಂಗಾನಂದ ಸ್ವಾಮೀಜಿ ಸಾನಿಧ್ಯ ವಹಿಸುವರು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರನಾಥ್ ಕಾರ್ಯಗಾರ ಉದ್ಧಟಿಸುವರು. ಮುಖ್ಯ ಅತಿಥಿಗಳಾಗಿ ರಂಗ ನಿರ್ದೇಶಕ ಕೆ.ಪಿ.ಎಂ.ಗಣೇಶಯ್ಯ, ಶ್ರೀ ಕಬೀರಾನಂದ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಹೆಚ್.ಟಿ.ಬಸವರಾಜ, ಹಿರಿಯ ಕಲಾವಿದ ಎಂ.ಕೆ.ಹರೀಶ್ ಭಾಗವಹಿಸುವರು. ಸಂಗೀತ ಕಲಾವಿದ ಗಂಗಾಧರ್ ಕೆ ಅವರು ಕಾರ್ಯಗಾರ ನಡೆಸಿಕೊಡುವರು ಎಂದು ಬಾದರದಿನ್ನಿ ಆಟ್ರ್ಸ್ ಅಕಾಡೆಮಿಯ ಕಾರ್ಯದರ್ಶಿ ಪ್ರಕಾಶ್ ಬಾದರದಿನ್ನಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.





