Dailyhunt Logo
  • Light mode
    Follow system
    Dark mode
    • Play Story
    • App Story
ದಾವಣಗೆರೆ : ಉಕ್ಕಿ ಹರಿಯುತ್ತಿರುವ ತುಂಗಭದ್ರಾ ನದಿ; ಉಕ್ಕಡಗಾತ್ರಿ ದೇವಸ್ಥಾನದ ಸ್ನಾನಘಟ್ಟ ಮುಳುಗಡೆ

ದಾವಣಗೆರೆ : ಉಕ್ಕಿ ಹರಿಯುತ್ತಿರುವ ತುಂಗಭದ್ರಾ ನದಿ; ಉಕ್ಕಡಗಾತ್ರಿ ದೇವಸ್ಥಾನದ ಸ್ನಾನಘಟ್ಟ ಮುಳುಗಡೆ

ದಾವಣಗೆರೆ.ಜುಲೈ.08: ಜಿಲ್ಲೆಯಲ್ಲಿ ಪ್ರವಾಹ ಭೀತಿ ಎದುರಾಗಿದ್ದು, ತುಂಗಾ ಜಲಾಶಯದಿಂದ ತುಂಗಭದ್ರಾ ನದಿಗೆ ಭಾರಿ ಪ್ರಮಾಣದ ನೀರನ್ನು ಬಿಡುಗಡೆ ಮಾಡಲಾಗಿದೆ. ಇದರಿಂದಾಗಿ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ತೀರದ ನಿವಾಸಿಗಳಲ್ಲಿ ತೀವ್ರ ಆತಂಕ ಸೃಷ್ಟಿಸಿದೆ.

ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದಂತೆ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಉಕ್ಕಡಗಾತ್ರಿಯ ಕರಿಬಸಜ್ಜ ದೇವಸ್ಥಾನದ ಸ್ನಾನಘಟ್ಟವು ಸಂಪೂರ್ಣವಾಗಿ ಜಲಾವೃತಗೊಂಡಿದೆ. ಭಾರಿ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ದೇವಸ್ಥಾನದ ಮುಂಭಾಗದ ಅಂಗಡಿ ಮುಂಗಟ್ಟುಗಳು ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ನೀರು ನುಗ್ಗಿದೆ.

ತುಂಗಭದ್ರಾ ನದಿಯ ಅಬ್ಬರಕ್ಕೆ ದಾವಣಗೆರೆ ಜಿಲ್ಲೆಯ ಹರಿಹರ, ಹೊನ್ನಾಳಿ ಹಾಗೂ ನ್ಯಾಮತಿ ತಾಲ್ಲೂಕುಗಳ ನದಿ ತೀರದ ಗ್ರಾಮಗಳಲ್ಲಿ ಪ್ರವಾಹದ ಭೀತಿ ಹೆಚ್ಚಾಗಿದೆ. ನದಿ ಪಾತ್ರದ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಸಾಧ್ಯತೆ ಇರುವುದರಿಂದ, ಮುನ್ನೆಚ್ಚರಿಕಾ ಕ್ರಮವಾಗಿ ನದಿ ತೀರಕ್ಕೆ ಸಾರ್ವಜನಿಕರು ಹಾಗೂ ಪ್ರವಾಸಿಗರು ತೆರಳದಂತೆ ಎಚ್ಚರಿಕೆ ನೀಡಲಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Suddione