Sunday, 09 May, 9.00 pm ಸುದ್ದಿಒನ್

ಪ್ರಮುಖ ಸುದ್ದಿ
ದೆಹಲಿಯಲ್ಲಿ ಮುಂದುವರಿದ ಕರೋನ ಅಟ್ಟಹಾಸ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕರೋನಾ ಅಟ್ಟಹಾಸ ಮುಂದುವರೆದಿದೆ.

ಭಾನುವಾರ ಒಂದೇ ದಿನ 13,336 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 13,23,567 ತಲುಪಿದ್ದು, 300 ಮಂದಿ ಸಾವನ್ನಪ್ಪಿದ್ದು ಇದುವರೆಗೆ 19,344 ಜನರು ಸಾವನ್ನಪ್ಪಿದ್ದಾರೆ.

ಭಾನುವಾರ ಒಟ್ಟು 61,552 ಜನರನ್ನು ಪರೀಕ್ಷಿಸಲಾಗಿದ್ದು, ಈ ಪೈಕಿ 49,787 ಆರ್‌ಟಿಪಿಸಿಆರ್ ಪರೀಕ್ಷೆ ನಡೆಸಿದ್ದು, 11,765 ಜನರಿಗೆ ಯಾಂಟಿಜೆನ್ ಪರೀಕ್ಷೆ ಮಾಡಲಾಗಿದೆ.

ರಾಷ್ಟ್ರ ರಾಜಧಾನಿಯಲ್ಲಿ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಲಾಕ್‌ಡೌನ್ ಅನ್ನು ಮತ್ತೊಮ್ಮೆ ವಿಸ್ತರಿಸಲಾಗಿದೆ.
ಲಾಕ್ ಡೌನ್ ಅನ್ನು ಮೇ 17 ರವರೆಗೆ ವಿಸ್ತರಿಸುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.

ಈ ಬಾರಿ ಲಾಕ್‌ಡೌನ್ ಅನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತದೆ. ಮೆಟ್ರೋ ಸೇವೆಗಳನ್ನೂ ರದ್ದುಗೊಳಿಸಲಾಗುವುದು. ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಲಾಕ್‌ಡೌನ್ ವಿಸ್ತರಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕೇಜ್ರಿವಾಲ್ ಹೇಳಿದರು. ಲಾಕ್‌ಡೌನ್ ನಿರೀಕ್ಷಿತ ಫಲ ನೀಡಲಿದೆ ಎಂದರು.

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 4,03,736 ಹೊಸ ಕರೋನಾ-ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, 4,000 ಜನರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಆರೋಗ್ಯ ಬುಲೆಟಿನ್ ನಲ್ಲಿ ಈ ವಿಷಯ ತಿಳಿಸಲಾಗಿದೆ.

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Suddione
Top