Dailyhunt
ಏಪ್ರಿಲ್ 7ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಸಾಧ್ಯತೆ: ಆನ್‌ಲೈನ್‌ನಲ್ಲಿ ಫಲಿತಾಂಶ ನೋಡುವ ವಿಧಾನ ಹೀಗೆ

ಏಪ್ರಿಲ್ 7ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಸಾಧ್ಯತೆ: ಆನ್‌ಲೈನ್‌ನಲ್ಲಿ ಫಲಿತಾಂಶ ನೋಡುವ ವಿಧಾನ ಹೀಗೆ

ರಾಜ್ಯಾದ್ಯಂತ ಕುತೂಹಲ ಮೂಡಿಸಿರುವ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವು ಏಪ್ರಿಲ್ 7ರಂದು ಪ್ರಕಟವಾಗುವ ಸಾಧ್ಯತೆ ಹೆಚ್ಚಿದೆ. ಈ ಬಾರಿ ಪರೀಕ್ಷೆ ಬರೆದ ಲಕ್ಷಾಂತರ ವಿದ್ಯಾರ್ಥಿಗಳ ನಿರೀಕ್ಷೆಗೆ ಶೀಘ್ರದಲ್ಲೇ ತೆರೆ ಬೀಳಲಿದೆ ಎಂದು ಶಿಕ್ಷಣ ಇಲಾಖೆಯ ಮೂಲಗಳು ತಿಳಿಸಿವೆ.ಈಗಾಗಲೇ ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಬಹುತೇಕ ಪೂರ್ಣಗೊಂಡಿದೆ.

ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ಪರೀಕ್ಷೆಗಳು ನಡೆದಿದ್ದು, ಮಾರ್ಚ್ 20ರಿಂದ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗಿತ್ತು. ರಾಜ್ಯದಾದ್ಯಂತ ಸುಮಾರು 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆಗೆ ಹಾಜರಾಗಿದ್ದರು.

ಶಿಕ್ಷಣ ಇಲಾಖೆ ಸೂಚಿಸಿರುವಂತೆ, ಏಪ್ರಿಲ್ 7ರಂದು ಫಲಿತಾಂಶ ಅಧಿಕೃತವಾಗಿ ಪ್ರಕಟವಾಗುವ ನಿರೀಕ್ಷೆ ಇದ್ದು, ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ ಮೂಲಕ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.

ಆನ್‌ಲೈನ್‌ನಲ್ಲಿ ಫಲಿತಾಂಶ ನೋಡುವ ವಿಧಾನ:
ಮೊದಲು karresults.nic.in ವೆಬ್‌ಸೈಟ್‌ಗೆ ಭೇಟಿ ನೀಡಿ.
'Karnataka 2nd PUC Result 2026' ಲಿಂಕ್ ಮೇಲೆ ಕ್ಲಿಕ್ ಮಾಡಿ.
ನಿಮ್ಮ ರಿಜಿಸ್ಟರ್ ನಂಬರ್ ಹಾಗೂ ಸ್ಟ್ರೀಮ್ ವಿವರಗಳನ್ನು ನಮೂದಿಸಿ.
'Submit' ಕ್ಲಿಕ್ ಮಾಡಿದರೆ ಫಲಿತಾಂಶ ಪರದೆಯ ಮೇಲೆ ಕಾಣಿಸುತ್ತದೆ.
ಫಲಿತಾಂಶವನ್ನು ಪರಿಶೀಲಿಸಿ, ಡೌನ್‌ಲೋಡ್ ಮಾಡಿ.
ಮುಂದಿನ ದಾಖಲೆ ಪ್ರಕ್ರಿಯೆಗಾಗಿ ಪ್ರಿಂಟ್‌ಔಟ್ ತೆಗೆದುಕೊಳ್ಳುವುದು ಉತ್ತಮ.

Dailyhunt
Disclaimer: This content has not been generated, created or edited by Dailyhunt. Publisher: Suddione