Dailyhunt Logo
  • Light mode
    Follow system
    Dark mode
    • Play Story
    • App Story
ಇಂದು ರಾಜ್ಯಾದ್ಯಂತ ಮೆಡಿಕಲ್ ಶಾಪ್ ಬಂದ್ !

ಇಂದು ರಾಜ್ಯಾದ್ಯಂತ ಮೆಡಿಕಲ್ ಶಾಪ್ ಬಂದ್ !

ರಾಜ್ಯಾದ್ಯಂತ ಮೇ 20ರಂದು ಖಾಸಗಿ ಮೆಡಿಕಲ್ ಶಾಪ್‌ಗಳು ಸಂಪೂರ್ಣ ಬಂದ್ ಆಗುವ ಸಾಧ್ಯತೆ ಇದ್ದು, ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದೆ. ಈಗಾಗಲೇ ಸಾರಿಗೆ ನೌಕರರ ಮುಷ್ಕರದ ಎಚ್ಚರಿಕೆಯಿಂದ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಭೀತಿ ಎದುರಾಗಿರುವ ನಡುವೆಯೇ, ಇದೀಗ ಔಷಧ ಅಂಗಡಿಗಳ ಬಂದ್ ಕೂಡ ಜನರನ್ನು ಕಂಗಾಲಾಗಿಸಿದೆ.

ಇ-ಫಾರ್ಮಸಿ ಹಾಗೂ ಆನ್‌ಲೈನ್ ಮೂಲಕ ಔಷಧ ಮಾರಾಟಕ್ಕೆ ವಿರೋಧ ವ್ಯಕ್ತಪಡಿಸಿ ದೇಶವ್ಯಾಪಿ ಬಂದ್‌ಗೆ ಕರೆ ನೀಡಲಾಗಿದೆ. ಕರ್ನಾಟಕದಲ್ಲೂ ಈ ಹೋರಾಟಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, 'ಕರ್ನಾಟಕ ರಸಾಯನಶಾಸ್ತ್ರಜ್ಞರು ಮತ್ತು ಔಷಧ ವ್ಯಾಪಾರಿಗಳ ಸಂಘ' (KCDA) ಸೇರಿದಂತೆ ಹಲವು ಪ್ರಮುಖ ಸಂಘಟನೆಗಳು ಬಂದ್‌ಗೆ ಬೆಂಬಲ ಘೋಷಿಸಿವೆ.ಆನ್‌ಲೈನ್ ಮೂಲಕ ವೈದ್ಯರ ಸೂಕ್ತ ಪ್ರಿಸ್ಕ್ರಿಪ್ಷನ್ ಇಲ್ಲದೆ ಔಷಧಿಗಳನ್ನು ಮಾರಾಟ ಮಾಡಲಾಗುತ್ತಿದೆ. ಇದು ಕಾನೂನು ಉಲ್ಲಂಘನೆಯಷ್ಟೇ ಅಲ್ಲ, ಸಾರ್ವಜನಿಕ ಆರೋಗ್ಯಕ್ಕೂ ಅಪಾಯಕಾರಿಯಾಗಿದೆ ಎಂದು ಸಂಘಟನೆಗಳು ಆರೋಪಿಸಿವೆ.

ಇಂತಹ ಅನಿಯಂತ್ರಿತ ಇ-ಫಾರ್ಮಸಿ ವ್ಯವಸ್ಥೆಯಿಂದ ಸಣ್ಣ ಔಷಧ ಅಂಗಡಿಗಳ ವ್ಯಾಪಾರಕ್ಕೆ ದೊಡ್ಡ ಹೊಡೆತ ಬೀಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿವೆ.ಆದರೆ, ತುರ್ತು ಆರೋಗ್ಯ ಸೇವೆಗಳಿಗೆ ಯಾವುದೇ ತೊಂದರೆಯಾಗದಂತೆ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ಒಳಗಿನ ಔಷಧಾಲಯಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ತಿಳಿಸಲಾಗಿದೆ. ಆದರೂ ದೀರ್ಘಕಾಲದ ಕಾಯಿಲೆಗಳಿಗೆ ನಿರಂತರ ಔಷಧ ಸೇವಿಸುವ ರೋಗಿಗಳು ಮುಂಚಿತವಾಗಿ ಅಗತ್ಯ ಔಷಧಿಗಳನ್ನು ಖರೀದಿಸಿಕೊಳ್ಳುವುದು ಒಳಿತು ಎಂದು ಸಲಹೆ ನೀಡಲಾಗಿದೆ.

ಒಂದೇ ದಿನ ಸಾರಿಗೆ ಮುಷ್ಕರ ಹಾಗೂ ಮೆಡಿಕಲ್ ಬಂದ್ ಸಂಭವಿಸುವ ಸಾಧ್ಯತೆಯಿಂದ ಸಾರ್ವಜನಿಕರು ಆತಂಕಗೊಂಡಿದ್ದು, ಸರ್ಕಾರ ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕೆಂದು ಒತ್ತಾಯ ಕೇಳಿಬರುತ್ತಿದೆ.

Dailyhunt
Disclaimer: This content has not been generated, created or edited by Dailyhunt. Publisher: Suddione