Dailyhunt Logo
  • Light mode
    Follow system
    Dark mode
    • Play Story
    • App Story
ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಆಯ್ಕೆ! ಕಾಂಗ್ರೆಸ್ ನಲ್ಲಿ ಮಹತ್ವದ ಬದಲಾವಣೆ

ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಆಯ್ಕೆ! ಕಾಂಗ್ರೆಸ್ ನಲ್ಲಿ ಮಹತ್ವದ ಬದಲಾವಣೆ

ಸುದ್ದಿಒನ್,ಬೆಂಗಳೂರು,ಜೂನ್.04:ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC)ಯ ಹೊಸ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ.

ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಿ.ಕೆ. ಶಿವಕುಮಾರ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಬಳಿಕ, ಕಾಂಗ್ರೆಸ್ ಹೈಕಮಾಂಡ್ ಈ ನಿರ್ಧಾರ ಕೈಗೊಂಡಿದೆ. ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಈ ಬದಲಾವಣೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಅಧ್ಯಕ್ಷರ ನಿರ್ದೇಶನದಂತೆ ಈ ನೇಮಕಾತಿಗೆ ಅನುಮೋದನೆ ನೀಡಲಾಗಿದೆ. ಈ ಕುರಿತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಬಿ.ಕೆ. ಹರಿಪ್ರಸಾದ್ ಅವರ ನೇಮಕಾತಿ ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ.

ದೀರ್ಘಕಾಲದಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಬಿ.ಕೆ. ಹರಿಪ್ರಸಾದ್ ಅವರಿಗೆ ಸಂಘಟನಾ ಅನುಭವ ಸಾಕಷ್ಟು ಇದೆ. ಅವರ ನೇಮಕದಿಂದ ರಾಜ್ಯ ಕಾಂಗ್ರೆಸ್ ಘಟಕಕ್ಕೆ ಹೊಸ ಚೈತನ್ಯ ಸಿಗುವ ನಿರೀಕ್ಷೆ ವ್ಯಕ್ತವಾಗಿದ್ದು, ಮುಂಬರುವ ರಾಜಕೀಯ ಬೆಳವಣಿಗೆಗಳ ಮೇಲೂ ಇದರ ಪರಿಣಾಮ ಬೀರುವ ಸಾಧ್ಯತೆ ಇದೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ನಡೆದ ಈ ಬದಲಾವಣೆ ರಾಜ್ಯ ರಾಜಕೀಯದಲ್ಲಿ ಗಮನಾರ್ಹ ಬೆಳವಣಿಗೆಯಾಗಿ ಪರಿಣಮಿಸಿದೆ. ವಿಶೇಷವಾಗಿ ಕಾಂಗ್ರೆಸ್ ಪಕ್ಷದ ಆಂತರಿಕ ಸಂಘಟನೆ ಮತ್ತು ಭವಿಷ್ಯದ ರಾಜಕೀಯ ತಂತ್ರಗಾರಿಕೆಯಲ್ಲಿ ಇದು ಮಹತ್ವದ ತಿರುವು ಎಂದು ವಿಶ್ಲೇಷಿಸಲಾಗುತ್ತಿದೆ.

Dailyhunt
Disclaimer: This content has not been generated, created or edited by Dailyhunt. Publisher: Suddione