Dailyhunt Logo
  • Light mode
    Follow system
    Dark mode
    • Play Story
    • App Story
ರಾಜ್ಯದಲ್ಲಿನ ಎಲ್ಲಾ ಬ್ಯಾಂಕ್ ಗಳೂ ಕನ್ನಡದಲ್ಲೇ ವ್ಯವಹರಿಸಬೇಕು : ಸಚಿವ ಶಿವರಾಜ ತಂಗಡಗಿ

ರಾಜ್ಯದಲ್ಲಿನ ಎಲ್ಲಾ ಬ್ಯಾಂಕ್ ಗಳೂ ಕನ್ನಡದಲ್ಲೇ ವ್ಯವಹರಿಸಬೇಕು : ಸಚಿವ ಶಿವರಾಜ ತಂಗಡಗಿ

ಬೆಂಗಳೂರು.ಸೆಪ್ಟೆಂಬರ್.02: ಕರ್ನಾಟಕದಲ್ಲಿ ಕಾರ್ಯನಿರ್ವಹಿಸುವ ಪ್ರತಿಯೊಂದು ಬ್ಯಾಂಕಿಗೂ ಕನ್ನಡಿಗರೊಂದಿಗೆ ಕನ್ನಡದಲ್ಲೇ ಸ್ಪಂದಿಸಿ ವ್ಯವಹರಿಸುವ ಜವಾಬ್ದಾರಿ ಇದೆ. ಅದು ಕನ್ನಡಿಗರ ಭಾಷಾ ಹಕ್ಕು ಎಂದು ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.

ಈ ನಿಟ್ಟಿನಲ್ಲಿ ಸ್ಥಳೀಯ ಭಾಷೆ ಮಾತನಾಡಬಲ್ಲ ಅಧಿಕಾರಿಗಳನ್ನು ನೇಮಿಸಲು ಮುಂದಾಗಿರುವ ಬ್ಯಾಂಕ್ ಆಫ್ ಬರೋಡಾ ಕ್ರಮ ಸ್ವಾಗತಿಸುತ್ತೇನೆ.

ಇದಕ್ಕಾಗಿ ಹೋರಾಟ ನಡೆಸಿದ್ದ ಕನ್ನಡಪರ ಸಂಘಟನೆಗಳಿಗೆ ಹಾಗೂ ಧ್ವನ ಎತ್ತಿದ್ದ ಕನ್ನಡಿಗರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.

ಇದೇ ಮಾದರಿಯಲ್ಲಿ ರಾಜ್ಯದಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಬ್ಯಾಂಕುಗಳು ಕನ್ನಡ ಬಲ್ಲ ಅಭ್ಯರ್ಥಿಗಳ ನೇಮಕಕ್ಕೆ ಮೊದಲ ಆದ್ಯತೆ ನೀಡಬೇಕು. ಈ ಕುರಿತು ಕೇಂದ್ರ ಹಣಕಾಸು ಇಲಾಖೆ ಸೂಕ್ತ ನಿಯಮ ರೂಪಿಸಬೇಕು ಒತ್ತಾಯಿಸುತ್ತೇನೆ. ಕನ್ನಡಿಗರು ತಮ್ಮದೇ ನೆಲದಲ್ಲಿ ಬ್ಯಾಂಕಿಂಗ್ ಸೇರಿದಂತೆ ಯಾವುದೇ ಸೇವೆ ಪಡೆಯುವಾಗ ಭಾಷೆಯ ಅಡೆತಡೆ ಎದುರಿಸಬಾರದು. ಕನ್ನಡದಲ್ಲಿ ಸೇವೆ ಪಡೆಯುವುದು ಕನ್ನಡಿಗರ ಹಕ್ಕು. ಅದನ್ನು ಖಾತ್ರಿಪಡಿಸುವುದು ಪ್ರತಿಯೊಂದು ಸಂಸ್ಥೆಯ ಕರ್ತವ್ಯ.

ಇದು ಕೇವಲ ಉದ್ಯೋಗದ ಪ್ರಶ್ನೆಯಲ್ಲ, ಕನ್ನಡಿಗರ ಭಾಷಾ ಹಕ್ಕು ಮತ್ತು ಆತ್ಮಗೌರವದ ಪ್ರಶ್ನೆ. ಕರ್ನಾಟಕದಲ್ಲಿ ಸೇವೆ ನೀಡುವ ಸಂಸ್ಥೆಗಳಿಗೆ ಕನ್ನಡ ಗೊತ್ತಿರಬೇಕು. ಕರ್ನಾಟಕದಲ್ಲಿ ಉದ್ಯೋಗ ನೀಡುವಾಗ ಕನ್ನಡಕ್ಕೆ ಆದ್ಯತೆ ಇರಬೇಕು ಎಂದು ಹೇಳಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Suddione