Dailyhunt Logo
  • Light mode
    Follow system
    Dark mode
    • Play Story
    • App Story
"ರಾಯರ ಫೋಟೋ ತಿರಸ್ಕರಿಸಿದ್ದಕ್ಕೇನಾ?": ಸಿದ್ದರಾಮಯ್ಯ ರಾಜೀನಾಮೆ ಸುತ್ತ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ!

"ರಾಯರ ಫೋಟೋ ತಿರಸ್ಕರಿಸಿದ್ದಕ್ಕೇನಾ?": ಸಿದ್ದರಾಮಯ್ಯ ರಾಜೀನಾಮೆ ಸುತ್ತ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ!

ರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಮತ್ತೊಂದು ವಿಚಾರ ಭಾರೀ ವೈರಲ್ ಆಗುತ್ತಿದೆ. ಕೆಲ ಸಮಯದ ಹಿಂದೆ ನಡೆದಿದ್ದ ಒಂದು ಘಟನೆಗೆ ಇಂದಿನ ರಾಜಕೀಯ ಬೆಳವಣಿಗೆಯನ್ನು ಜೋಡಿಸಿ ನೆಟ್ಟಿಗರು ವಿವಿಧ ರೀತಿಯ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ.

ಕೆಲವು ತಿಂಗಳುಗಳ ಹಿಂದೆ ಸಿದ್ದರಾಮಯ್ಯ ಅವರು ಕಾರಿನಲ್ಲೇ ಕುಳಿತು ಸಾರ್ವಜನಿಕರ ಅಹವಾಲು ಸ್ವೀಕರಿಸುತ್ತಿದ್ದ ವೇಳೆ, ಅಭಿಮಾನಿಯೊಬ್ಬರು ಶ್ರೀ ರಾಘವೇಂದ್ರ ಸ್ವಾಮಿಗಳ ಫೋಟೋವನ್ನು ಉಡುಗೊರೆಯಾಗಿ ನೀಡಲು ಮುಂದಾಗಿದ್ದರು. ಆದರೆ ಸಿಎಂ ಆ ಫೋಟೋ ಸ್ವೀಕರಿಸದೆ ವಾಪಸ್ ನೀಡಿದ ಘಟನೆ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿತ್ತು.ಈ ಘಟನೆಗೆ ರಾಯರ ಭಕ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ನಟ ಜಗ್ಗೇಶ್ ಕೂಡ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿ, "ರಾಯರನ್ನು ಕಡೆಗಣಿಸಿದರೆ ಯಾರೂ ಉದ್ಧಾರವಾಗಲ್ಲ" ಎಂದು ಬರೆದುಕೊಂಡಿದ್ದರು. ಆ ಹೇಳಿಕೆ ಕೂಡ ಆ ವೇಳೆ ಸಾಕಷ್ಟು ವೈರಲ್ ಆಗಿತ್ತು.

ಇದೀಗ ಗುರುವಾರದಂದೇ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿರುವ ಹಿನ್ನೆಲೆ, "ರಾಯರ ಫೋಟೋ ತಿರಸ್ಕರಿಸಿದ್ದಕ್ಕೆ ಇದೇ ಫಲ", "ರಾಯರ ದಿನವಾದ ಗುರುವಾರವೇ ಅಧಿಕಾರ ಕಳೆದುಕೊಳ್ಳುವ ಪರಿಸ್ಥಿತಿ ಬಂದಿದೆ" ಎಂಬ ರೀತಿಯ ಪೋಸ್ಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಕೆಲವರು ಇದನ್ನು ಕೇವಲ ಯಾದೃಚ್ಛಿಕ ಎಂದು ಹೇಳುತ್ತಿದ್ದರೆ, ಇನ್ನೂ ಕೆಲವರು ಇದನ್ನು ಭಕ್ತಿಭಾವದ ದೃಷ್ಟಿಯಿಂದ ಚರ್ಚಿಸುತ್ತಿದ್ದಾರೆ.

ಇನ್ನೊಂದೆಡೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಧ್ಯಾಹ್ನ 2.30ಕ್ಕೆ ಲೋಕಭವನಕ್ಕೆ ಭೇಟಿ ನೀಡಲಿದ್ದು, ಬಳಿಕ ಮಧ್ಯಾಹ್ನ 3 ಗಂಟೆಗೆ ಗೃಹ ಕಚೇರಿ 'ಕೃಷ್ಣಾ'ದಲ್ಲಿ ಮಹತ್ವದ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಈ ವೇಳೆ ರಾಜೀನಾಮೆ ಕುರಿತು ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

Dailyhunt
Disclaimer: This content has not been generated, created or edited by Dailyhunt. Publisher: Suddione