Dailyhunt Logo
  • Light mode
    Follow system
    Dark mode
    • Play Story
    • App Story
ವಸತಿ ಯೋಜನೆ ಸೌಲಭ್ಯ: ಅರ್ಜಿ ಆಹ್ವಾನ

ವಸತಿ ಯೋಜನೆ ಸೌಲಭ್ಯ: ಅರ್ಜಿ ಆಹ್ವಾನ

ಚಿತ್ರದುರ್ಗ.ಜೂ.01: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ ಜಿಲ್ಲೆಗೆ ವಸತಿ ಯೋಜನೆಯಡಿ ಮನೆಗಳನ್ನು ನಿರ್ಮಾಣ ಮಾಡಿಕೊಡಲು ಗುರಿ ನಿಗದಿಪಡಿಸಲಾಗಿದೆ. ಜಿಲ್ಲಾಧಿಕಾರಿಗಳ ಆಯ್ಕೆ ಸಮಿತಿಯ ಮೂಲಕ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು.

ವಸತಿ ಸೌಲಭ್ಯ ಪಡೆಯಲು ಪರಿಶಿಷ್ಟ ಜಾತಿಯ ಸಮುದಾಯದ ಅರ್ಹ ಅಲೆಮಾರಿ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಹೊಸದುರ್ಗದ “ಸಹಾಯಕರ ನಿರ್ದೇಶಕರು (ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ” ಕಚೇರಿಯಿಂದ ಅರ್ಜಿಗಳನ್ನು ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ದ್ವಿಪ್ರತಿಯಲ್ಲಿ, ಜೂನ್ 30 ರ ಒಳಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08199-230050 ಸಂಪರ್ಕಿಸಬಹುದು ಎಂದು ಹೊಸದುರ್ಗ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Suddione