Dailyhunt Logo
  • Light mode
    Follow system
    Dark mode
    • Play Story
    • App Story
ವಿದ್ಯಾರ್ಥಿಗಳೇ ಗಮನಿಸಿ : 2026-27ನೇ ಸಾಲಿನ ಡಿಪ್ಲೊಮಾ ಪ್ಯಾರಾಮೆಡಿಕಲ್ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ

ವಿದ್ಯಾರ್ಥಿಗಳೇ ಗಮನಿಸಿ : 2026-27ನೇ ಸಾಲಿನ ಡಿಪ್ಲೊಮಾ ಪ್ಯಾರಾಮೆಡಿಕಲ್ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು.ಸೆಪ್ಟೆಂಬರ್.02: ಕರ್ನಾಟಕ ನರ್ಸಿಂಗ್ ಮತ್ತು ಅರೆವೈದ್ಯಕೀಯ ವಿಜ್ಞಾನಗಳ ಶಿಕ್ಷಣ (ನಿಯಂತ್ರಣ) ಪ್ರಾಧಿಕಾರ ಹಾಗೂ ಅಲೈಡ್ ಅಂಡ್ ಹೆಲ್ತ್‌ಕೇರ್ (ಪ್ಯಾರಾಮೆಡಿಕಲ್ ಬೋರ್ಡ್) ವತಿಯಿಂದ 2026-27ನೇ ಸಾಲಿನ ಪ್ಯಾರಾಮೆಡಿಕಲ್ ಡಿಪ್ಲೊಮಾ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಸರ್ಕಾರಿ ಪ್ಯಾರಾಮೆಡಿಕಲ್ ಮಹಾವಿದ್ಯಾಲಯಗಳು ಹಾಗೂ ರಾಜ್ಯದ ವಿವಿಧ ಖಾಸಗಿ ವೈದ್ಯಕೀಯ ಸಂಸ್ಥೆಗಳಲ್ಲಿ ಸರ್ಕಾರಿ ಕೋಟಾದಡಿ ಲಭ್ಯವಿರುವ ಸೀಟುಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಸ್ವೀಕರಿಸಲಾಗುತ್ತಿದೆ.

ಅರ್ಜಿಗೆ ಲಭ್ಯವಿರುವ ಕೋರ್ಸ್‌ಗಳು:

ಡಿಪ್ಲೊಮಾ ಇನ್ ಮೆಡಿಕಲ್ ಲ್ಯಾಬೋರೇಟರಿ ಟೆಕ್ನಾಲಜಿ (DMLT)

ಡಿಪ್ಲೊಮಾ ಇನ್ ಮೆಡಿಕಲ್ ರೇಡಿಯಾಲಜಿ ಮತ್ತು ಇಮೇಜಿಂಗ್ ಟೆಕ್ನಾಲಜಿ (DMRIT)

ಡಿಪ್ಲೊಮಾ ಇನ್ ಡಯಾಲಿಸಿಸ್ ಟೆಕ್ನಾಲಜಿ (DDT)

ಡಿಪ್ಲೊಮಾ ಇನ್ ಅನಸ್ತೀಷಿಯಾ ಮತ್ತು ಆಪರೇಷನ್ ಥಿಯೇಟರ್ ಟೆಕ್ನಾಲಜಿ (D.AOTT)

ಡಿಪ್ಲೊಮಾ ಇನ್ ಆಪ್ತಾಲ್ಮಿಕ್ ಅಸಿಸ್ಟೆಂಟ್ (DOA)

ಶೈಕ್ಷಣಿಕ ಅರ್ಹತೆ:

ಮೇಲಿನ ಎಲ್ಲಾ ಕೋರ್ಸ್‌ಗಳಿಗೆ ಪಿಯುಸಿ ವಿಜ್ಞಾನ ವಿಭಾಗದಲ್ಲಿ Physics, Chemistry ಹಾಗೂ Biology/Mathematics ವಿಷಯಗಳನ್ನು ಅಭ್ಯಾಸ ಮಾಡಿರುವುದು ಅಗತ್ಯ.

ಅಭ್ಯರ್ಥಿಗಳು ಕನಿಷ್ಠ 17 ವರ್ಷ ವಯಸ್ಸು ಹೊಂದಿರಬೇಕು. ಅರ್ಜಿ ಸಲ್ಲಿಸುವಾಗ ಸಂಬಂಧಿತ ದಾಖಲೆಗಳನ್ನು ಕಡ್ಡಾಯವಾಗಿ ಅಪ್‌ಲೋಡ್ ಮಾಡಬೇಕು.

ಅರ್ಜಿ ಶುಲ್ಕ:

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ₹400, ಪರಿಶಿಷ್ಟ ಜಾತಿ/ಪಂಗಡ ಹಾಗೂ ಪ್ರವರ್ಗ-1 ಅಭ್ಯರ್ಥಿಗಳಿಗೆ ₹250 ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಶುಲ್ಕವನ್ನು ಆನ್‌ಲೈನ್ ಮೂಲಕ ಡೆಬಿಟ್/ಕ್ರೆಡಿಟ್ ಕಾರ್ಡ್ ಅಥವಾ ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:

ಸೆಪ್ಟೆಂಬರ್ 21, 2026. ಆನ್‌ಲೈನ್ ಅರ್ಜಿ ಪ್ರಕ್ರಿಯೆ ಸೆಪ್ಟೆಂಬರ್ 1ರಿಂದ ಸೆಪ್ಟೆಂಬರ್ 21ರವರೆಗೆ ನಡೆಯಲಿದೆ. ಸೆಪ್ಟೆಂಬರ್ 21ರ ನಂತರ ಯಾವುದೇ ಕಾರಣಕ್ಕೂ ಆಫ್‌ಲೈನ್ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

ಅರ್ಜಿ ಸಲ್ಲಿಸಿದ ಬಳಿಕ ಅಭ್ಯರ್ಥಿಗಳಿಗೆ ಮೊಬೈಲ್ ಸಂಖ್ಯೆಗೆ SMS ಮೂಲಕ ಮಾಹಿತಿ ಕಳುಹಿಸಲಾಗುತ್ತದೆ. ಆನ್‌ಲೈನ್ ಅರ್ಜಿ ಪ್ರಕ್ರಿಯೆ ಪೂರ್ಣಗೊಂಡ ನಂತರ ಅಭ್ಯರ್ಥಿಗಳ ಕೋರ್ಸ್ ಮತ್ತು ಕಾಲೇಜು ಆಯ್ಕೆ ಪ್ರಕ್ರಿಯೆ ಆನ್‌ಲೈನ್‌ನಲ್ಲೇ ನಡೆಯಲಿದೆ.

Dailyhunt
Disclaimer: This content has not been generated, created or edited by Dailyhunt. Publisher: Suddione