ಗುವಾಹಟಿ,ಏಪ್ರಿಲ್ 03: ಅಸ್ಸಾಂ ವಿಧಾನಸಭಾ ಚುನಾವಣೆಯ ಕಣ ರಂಗೇರುತ್ತಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಏಕರೂಪ ನಾಗರಿಕ ಸಂಹಿತೆ (UCC) ಜಾರಿಯ ಕುರಿತು ಅತ್ಯಂತ ಪ್ರಬಲವಾದ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಯುಸಿಸಿ ಕಾಯ್ದೆಯನ್ನು ಜಾರಿಗೆ ತರಲಾಗುವುದು, ಇದರಿಂದಾಗಿ ಅಕ್ರಮ ನುಸುಳುಕೋರರು ನಾಲ್ಕು ಬಾರಿ ವಿವಾಹವಾಗುವ ಪದ್ಧತಿಗೆ ಕಾನೂನಾತ್ಮಕವಾಗಿ ಅಂತ್ಯ ಹಾಡಲಾಗುವುದು ಎಂದು ಅವರು ಘೋಷಿಸಿದ್ದಾರೆ.ಇಂದು ಅಸ್ಸಾಂನ ವಿವಿಧೆಡೆ ಆಯೋಜಿಸಲಾಗಿದ್ದ ಬೃಹತ್ ಚುನಾವಣಾ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಅಕ್ರಮ ವಲಸಿಗರು ಮತ್ತು ನುಸುಳುಕೋರರು ದೇಶದ ಕಾನೂನು ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು.

