Dailyhunt
ಚಿಕ್ಕಬಳ್ಳಾಪುರ: ಕಂಟೈನರ್ ಲಾರಿಗೆ ಕಾರು ಡಿಕ್ಕಿ - ನವವಿವಾಹಿತೆ ಸೇರಿ ಇಬ್ಬರು ಸಾವು

ಚಿಕ್ಕಬಳ್ಳಾಪುರ: ಕಂಟೈನರ್ ಲಾರಿಗೆ ಕಾರು ಡಿಕ್ಕಿ - ನವವಿವಾಹಿತೆ ಸೇರಿ ಇಬ್ಬರು ಸಾವು

ಚಿಕ್ಕಬಳ್ಳಾಪುರ, ಏಪ್ರಿಲ್ 02: ಕಂಟೇನರ್​ಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನಪ್ಪಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಶೆಟ್ಟಿಗೆರೆ ಕ್ರಾಸ್ ಬಳಿ ನಡೆದಿದೆ. 5 ತಿಂಗಳ ಹಿಂದೆ ಮದುವೆಯಾಗಿದ್ದ ರಕ್ಷಿತಾ ರೆಡ್ಡಿ(28) ಮತ್ತು ಸಂಬಂಧಿ ಪವನ್ ರೆಡ್ಡಿ(30) ಸ್ಥಳದಲ್ಲೇ ಸಾವನ್ನಪ್ಪಿದ್ದು, ರಕ್ಷಿತಾ ಪತಿ ರಾಜಶೇಖರರೆಡ್ಡಿ ಸ್ಥಿತಿ ಗಂಭೀರವಾಗಿದೆ.
ಪೆರೇಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ಕಾರು, ಮುಂದೆ ಹೋಗುತ್ತಿದ್ದ ಕಂಟೇನರ್ ಲಾರಿಗೆ ಹಿಂಬದಿಯಿಂದ ಅತಿ ವೇಗವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ರಕ್ಷಿತಾ ರೆಡ್ಡಿ (23) ಹಾಗೂ ಅವರ ಸಂಬಂಧಿ ಪವನ್ ರೆಡ್ಡಿ (30) ತೀವ್ರ ರಕ್ತಸ್ರಾವದಿಂದಾಗಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ರಕ್ಷಿತಾ ಅವರ ಪತಿ ರಾಜಶೇಖರ್ ರೆಡ್ಡಿ ಅವರಿಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.ಮೃತ ರಕ್ಷಿತಾ ಹಾಗೂ ಗಾಯಾಳು ರಾಜಶೇಖರ್ ಇಬ್ಬರೂ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್‌ಗಳಾಗಿ ಕಾರ್ಯನಿರ್ವಹಿಸುತ್ತಿದ್ದರು. ಕಳೆದ ನವೆಂಬರ್‌ನಲ್ಲಿಷ್ಟೇ ಈ ದಂಪತಿಯ ವಿವಾಹ ಅದ್ಧೂರಿಯಾಗಿ ನೆರವೇರಿತ್ತು. ಗುರುವಾರ ತಮ್ಮ ಸಂಬಂಧಿ ಪವನ್ ರೆಡ್ಡಿ ಅವರೊಂದಿಗೆ ಅನಂತಪುರ ಜಿಲ್ಲೆಯ ಸ್ವಗ್ರಾಮವಾದ 'ಅವಳಗಿ'ಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
Dailyhunt
Disclaimer: This content has not been generated, created or edited by Dailyhunt. Publisher: themangaloremirror