Dailyhunt

ದುಬೈನಿಂದ ಅಕ್ರಮವಾಗಿ ಚಿನ್ನ ತಂದ ಇಬ್ಬರ ಸೆರೆ

ಮಂಗಳೂರು ಜುಲೈ 15: ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟಕ್ಕೆ ಯತ್ನಿಸಿದ್ದ ಇಬ್ಬರನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬಂಧಿತರಿಂದ 34.46 ಲಕ್ಷ ಮೌಲ್ಯದ ಚಿನ್ನ ವಶಪಡಿಸಿಕೊಂಡಿದ್ದಾರೆ.


ಬಂಧಿತರನ್ನು ಕೇರಳದ ಮೊಹ್ಮದ್ ಅನ್ಸಾರ್ ಹಾಗೂ ಮೊಹಮ್ಮದ್ ಮೂಸಾ ಮಿಯಾಸ್ ಎಂದು ಗುರುತಿಸಲಾಗಿದ್ದು, ಆರೋಪಿಗಳು ಸೂಟ್‌ಕೇಸ್‌ನ ತಳಭಾಗದಲ್ಲಿ ಚಿನ್ನವನ್ನು ಅಡಗಿಸಿ ಇಟ್ಟಿದ್ದರು. ತಪಾಸಣೆಗೆ ಒಳಪಡಿಸಿದಾಗ ಒಟ್ಟು ₹ 34,46,464 ಮೌಲ್ಯದ 703 ಗ್ರಾಂ‌ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಕಸ್ಟಮ್ಸ್ ಉಪ ಆಯುಕ್ತ ಪ್ರವೀಣ ಕಂಡಿ, ಅಧಿಕಾರಿಗಳಾದ‌ ನಾಗೇಶ್ ಕುಮಾರ್, ಮನೋಕಾತ್ಯಾಯಿನಿ ಈ‌ ಕಾರ್ಯಾಚರಣೆ ನಡೆಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: themangaloremirror