Dailyhunt Logo
  • Light mode
    Follow system
    Dark mode
    • Play Story
    • App Story
ಫೋರ್ಬ್ಸ್ ಇಂಡಿಯಾ ಟಾಪ್ 100 ಸೆಲೆಬ್ರಿಟಿಗಳ ಪಟ್ಟಿಯಲ್ಲಿ ನಟ, ನಿರ್ದೇಶಕ ರಿಷಬ್ ಶೆಟ್ಟಿ

ಫೋರ್ಬ್ಸ್ ಇಂಡಿಯಾ ಟಾಪ್ 100 ಸೆಲೆಬ್ರಿಟಿಗಳ ಪಟ್ಟಿಯಲ್ಲಿ ನಟ, ನಿರ್ದೇಶಕ ರಿಷಬ್ ಶೆಟ್ಟಿ

ಬೆಂಗಳೂರು: ಪ್ರತಿಷ್ಠಿತ 'ಫೋರ್ಬ್ಸ್ ಇಂಡಿಯಾ' ಬಿಡುಗಡೆ ಮಾಡಿರುವ ದೇಶದ ಪ್ರಮುಖ 100 ಗಣ್ಯ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಸ್ಯಾಂಡಲ್‌ವುಡ್‌ನ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಸ್ಥಾನ ಪಡೆದಿದ್ದು, ಕನ್ನಡ ಚಿತ್ರರಂಗದ ಹಿರಿಮೆಯನ್ನು ಮತ್ತೊಮ್ಮೆ ಜಾಗತಿಕ ಮಟ್ಟಕ್ಕೆ ಕೊಂಡೊಯ್ದಿದ್ದಾರೆ.
'ಕಾಂತಾರ' ಸಿನಿಮಾ ಸೃಷ್ಟಿಸಿದ ಅಭೂತಪೂರ್ವ ಯಶಸ್ಸು ಮತ್ತು ಅವರ ಸಿನಿಮಾಗಳ ಪ್ರಭಾವವೇ ಈ ಸಾಧನೆಗೆ ಪ್ರಮುಖ ಕಾರಣವಾಗಿದೆ. ನಟ, ನಿರ್ದೇಶಕ ಹಾಗೂ ಬರಹಗಾರ - ಈ ಮೂರೂ ವಿಭಾಗಗಳಲ್ಲಿ ಆಯ್ಕೆಯಾದ ಏಕೈಕ ವ್ಯಕ್ತಿ ರಿಷಬ್ ಶೆಟ್ಟಿ ಎಂಬುದು ಕನ್ನಡಿಗರಿಗೆ ಹೆಮ್ಮೆಯ ವಿಷಯ. ಭಾರತದ ಬೇರೆ ಯಾವ ಭಾಷೆಯ ಸೆಲೆಬ್ರಿಟಿಯೂ ಮಾಡಿರದ ಇಂತಹ ವಿಶಿಷ್ಟ ಸಾಧನೆಯನ್ನು ಮಾಡುವ ಮೂಲಕ ಅವರು ಹೊಸ ದಾಖಲೆ ಬರೆದಿದ್ದಾರೆ.ಹೊಂಬಾಳೆ ಫಿಲ್ಮ್ಸ್ ಲಾಂಛನದಲ್ಲಿ ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿದ್ದ 'ಕಾಂತಾರ: ಚಾಪ್ಟರ್ 1' ವಿಶ್ವಾದ್ಯಂತ ಭರ್ಜರಿ ಪ್ರದರ್ಶನ ಕಂಡು ₹800 ಕೋಟಿಗೂ ಅಧಿಕ ಗಳಿಕೆ ಮಾಡಿತ್ತು. ಈ ಮೂಲಕ 2025ರ ಸಾಲಿನಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ಪ್ರಮುಖ ಭಾರತೀಯ ಚಿತ್ರವಾಗಿ ಹೊರಹೊಮ್ಮಿತ್ತಲ್ಲದೆ, ಬಾಲಿವುಡ್‌ನ 'ಛಾವಾ' ಚಿತ್ರದ ಗಳಿಕೆಯನ್ನೂ ಹಿಂದಿಕ್ಕಿತ್ತು. ಸಾರ್ವಕಾಲಿಕ ಅತಿ ಹೆಚ್ಚು ಗಳಿಕೆ ಕಂಡ ಕನ್ನಡ ಚಿತ್ರಗಳ ಪಟ್ಟಿಯಲ್ಲೂ ಅಗ್ರಸ್ಥಾನ ಪಡೆದುಕೊಂಡಿತ್ತು.ಸ್ಥಳೀಯ ಜನಪದ, ದೈವಾರಾಧನೆ ಮತ್ತು ಪ್ರಕೃತಿ - ಮಾನವನ ನಡುವಿನ ಸಂಘರ್ಷವನ್ನು ಅದ್ಭುತವಾಗಿ ತೆರೆಗೆ ತಂದಿದ್ದ ಈ ಚಿತ್ರವು ಜಾಗತಿಕ ಮಟ್ಟದ ವಿಮರ್ಶಕರ ಮೆಚ್ಚುಗೆಗೆ ಪಾತ್ರವಾಗಿತ್ತು. ಸ್ಥಳೀಯ ಕಥೆಗಳನ್ನು ಜಾಗತಿಕ ಗುಣಮಟ್ಟದಲ್ಲಿ ಕಟ್ಟಿಕೊಡುವ ಮೂಲಕ ಕನ್ನಡಿಗರೊಬ್ಬರು ದೇಶದ ಟಾಪ್ 100 ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿರುವುದು ಸ್ಯಾಂಡಲ್‌ವುಡ್ ಇತಿಹಾಸದಲ್ಲಿಯೇ ಮಹತ್ವದ ಮೈಲಿಗಲ್ಲಾಗಿದೆ.
Dailyhunt
Disclaimer: This content has not been generated, created or edited by Dailyhunt. Publisher: themangaloremirror