ಹುಬ್ಬಳ್ಳಿ/ದಾವಣಗೆರೆ ,ಏಪ್ರಿಲ್ 03 : ಹುಬ್ಬಳ್ಳಿ ನಗರದ ಜಿಮ್ ಟ್ರೈನರ್ ಒಬ್ಬ ಯುವತಿಯ ಮೇಲೆ ಅತ್ಯಾಚಾರ ಎಸಗಿರುವ ಆರೋಪಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ತೀವ್ರವಾಗಿ ಪ್ರತಿಕ್ರಿಯಿಸಿದ್ದು, ಆರೋಪಿ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಹಸಿರು ನಿಶಾನೆ ತೋರಿಸಿದ್ದಾರೆ.ದಾವಣಗೆರೆಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಹುಬ್ಬಳ್ಳಿಯ ಪ್ರಕರಣದ ಕುರಿತು ತಾವು ಈಗಾಗಲೇ ಹಿರಿಯ ಅಧಿಕಾರಿಗಳಿಂದ ಪ್ರಾಥಮಿಕ ಮಾಹಿತಿ ಪಡೆದುಕೊಂಡಿರುವುದಾಗಿ ತಿಳಿಸಿದರು.
ಅಷ್ಟೇ ಅಲ್ಲದೆ, ಕೃತ್ಯವನ್ನು ವಿಡಿಯೋ ಚಿತ್ರೀಕರಿಸಿಕೊಂಡು ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿ ಯುವತಿಗೆ ಸತತವಾಗಿ ಕಿರುಕುಳ ನೀಡುತ್ತಿದ್ದ ಎಂಬ ವಿಚಾರ ಸಂತ್ರಸ್ತೆಯ ಹೇಳಿಕೆಯಿಂದ ತಿಳಿದುಬಂದಿದೆ. ಸಂತ್ರಸ್ತೆಯು ಧೈರ್ಯ ಮಾಡಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಂತರ ಈ ಪ್ರಕರಣ ಬೆಳಕಿಗೆ ಬಂದಿದೆ.ಹುಬ್ಬಳ್ಳಿಯಲ್ಲಿ ಜಿಮ್ ತರಬೇತುದಾರನ ಮೇಲಿನ ಹಲ್ಲೆ ಪ್ರಕರಣಕ್ಕೆ ಮಹತ್ವದ ಟ್ವಿಸ್ಟ್ ದೊರೆತಿದ್ದು, ಈ ಪ್ರಕರಣದ ಸಂತ್ರಸ್ತ ಯುವತಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡುವ ಪ್ರಕರಣಕ್ಕೆ ಟ್ವಿಸ್ಟ್ ನೀಡಿದ್ದಾರೆ. ಅಜ್ಞಾತ ಸ್ಥಳದಿಂದ ಸಂತ್ರಸ್ತ ಯುವತಿ ವಿಡಿಯೋವೊಂದನ್ನ ಬಿಡುಗಡೆ ಮಾಡಿದ್ದು, ವಿಡಿಯೋದಲ್ಲಿ ಸಮೀರ್ ಮುಲ್ಲಾ ಮತ್ತಿನ ಔಷಧ ನೀಡಿ ತನ್ನ ಮೇಲೆ ಅತ್ಯಾಚಾರವೆಸಗಿದ ಎಂದು ಆರೋಪಿಸಿದ್ದಾರೆ. ಜಿಮ್ ಟ್ರೈನರ್ ಸಮೀರ್ ವಿರುದ್ಧ ರೇಪ್ ಆರೋಪ ಮಾಡಿರುವ ಸಂತ್ರಸ್ತೆ ಸಮೀರ್ ಅತ್ಯಾಚಾರದ ಬಗ್ಗೆ ಎಳೆಎಳೆಯಾಗಿ ಬಿಟ್ಟಿದ್ದಾರೆ.ಸಮೀರ್ ಅಕ್ಕ ತೈಸೀಮ್ ಮುಲ್ಲಾ ನನ್ನ ಸ್ನೇಹಿತೆ ಆಕೆಯಿಂದ ಸಮೀರ್ ಪರಿಚಯವಾಗಿತ್ತು.
ತೈಸೀಮ್ ಜೊತೆಗೆ ಸ್ನೇಹಿತೆಯಾಗಿ ಹಲವಾರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೇವೆ. ಬರ್ತ್ ಡೇ ಪಾರ್ಟಿ, ವೀಕೆಂಡ್ ಪಾರ್ಟಿಗೆ ಹೋಗಿದ್ದೆವು. ಸಮೀರ್ ಸಹ ಅಲ್ಲಿಗೆ ಬಂದಿದ್ದ, ಇದಾದ ಮೇಲೆ ಸಮೀರ್ ಆತ್ಮೀಯನಾದ ಎಂದು ಸಂತ್ರಸ್ತೆ ಹೇಳಿದ್ದಾರೆ.ಅಂತೆಯೇ ಒಂದು ದಿನ ಸಮೀರ್ ತನ್ನ ಮನೆಗೆ ಕರೆದುಕೊಂಡು ಹೋಗಿದ್ದ. ಆಗ ನನಗೆ ಮತ್ತು ಜ್ಯೂಸ್‌ನಲ್ಲಿ ಬರುವ ಔಷಧ ಬೆರಸಿ ಕೊಟ್ಟು ನನ್ನ ಮೇಲೆ ಅತ್ಯಾಚಾರ ಮಾಡಿ ವಿಡಿಯೋ ಮಾಡಿಕೊಂಡಿದ್ದ ಎಂದು ಸಂತ್ರಸ್ಥೆ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಸಮೀರ್ ವಿಡಿಯೋ ಮಾಡಿದ್ದು ನನಗೆ ಗೊತ್ತಿರಲಿಲ್ಲ, ವಿಡಿಯೋ ತೋರಿಸಿದ ಮೇಲೆ ನನಗೆ ಗೊತ್ತಾಯಿತು. ಆ ಮೇಲೆ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಿ ನನಗೆ ಮೋಸ ಮಾಡಿದ್ದಾನೆ ಎಂದು ಸಂತ್ರಸ್ತೆ ದೂರಿದ್ದಾರೆ. ಮಾತ್ರವಲ್ಲದೇ ಜಿಮ್ ಗೆ ಬರುವ ಯುವತಿಯ ತಲೆ ಕಡೆಸಿ ಆಕೆಯ ಜೊತೆ ಖಾಸಗಿ ಕ್ಷಣಗಳನ್ನು ಕಳೆದು, ಅದನ್ನು ವಿಡಿಯೋ ಮಾಡಿಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.

