ಗೀತಾಂಶಿ ಮತ್ತು ಗೀತಾ ನವಿಕಾ (5) ಕೊಲೆಯಾದ ದುರ್ದೈವಿಗಳು. ಆರೋಪಿ ಶ್ರೀಶೈಲಂ ತನ್ನ ಪತ್ನಿ ಮೌನಿಕಾ ಮನೆಯಲ್ಲಿ ಇಲ್ಲದ ಸಮಯ ಸಾಧಿಸಿ, ಇಬ್ಬರು ಮಕ್ಕಳನ್ನು ಬೈಕ್‌ನಲ್ಲಿ ಕರೆದುಕೊಂಡು ಹೋಗಿದ್ದಾನೆ. ಮಕ್ಕಳಿಗೆ ಬಲವಂತವಾಗಿ ಕೀಟನಾಶಕ ಕುಡಿಸಿ, ನಂತರ ಅವರನ್ನು ಕೃಷಿ ಬಾವಿಗೆ ಎಸೆದಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.ಮನೆಗೆ ಹಿಂತಿರುಗಿದ ಪತ್ನಿ ಮೌನಿಕಾ ಮಕ್ಕಳು ಕಾಣದಿದ್ದಾಗ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಬಾವಿಯಲ್ಲಿ ಮಕ್ಕಳ ಶವ ಪತ್ತೆಯಾಗಿದೆ. ಪತ್ನಿ ಮತ್ತು ಗ್ರಾಮಸ್ಥರು ಶ್ರೀಶೈಲಂನನ್ನು ತರಾಟೆಗೆ ತೆಗೆದುಕೊಂಡಾಗ ಆತ ತನ್ನ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ. ಇದರಿಂದ ಆಕ್ರೋಶಗೊಂಡ ಸ್ಥಳೀಯರು ಆರೋಪಿಗೆ ತೀವ್ರವಾಗಿ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ತಂದೆಗೆ ಹೆಣ್ಣು ಮಕ್ಕಳೆಂದರೆ ಮೊದಲಿನಿಂದಲೂ ಇಷ್ಟವಿರಲಿಲ್ಲ, ಇದೇ ವಿಷಯವಾಗಿ ಪತ್ನಿಯೊಂದಿಗೆ ನಿರಂತರ ಜಗಳವಾಡುತ್ತಿದ್ದ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.