Dailyhunt Logo
  • Light mode
    Follow system
    Dark mode
    • Play Story
    • App Story
ಕೆಪಿಎಸ್‌ಸಿ ನೇಮಕಾತಿ ಹಗರಣ - IAS ಅಧಿಕಾರಿ ಗ್ಯಾನೇಂದ್ರ ಕುಮಾರ್‌ ಅರೆಸ್ಟ್‌

ಕೆಪಿಎಸ್‌ಸಿ ನೇಮಕಾತಿ ಹಗರಣ - IAS ಅಧಿಕಾರಿ ಗ್ಯಾನೇಂದ್ರ ಕುಮಾರ್‌ ಅರೆಸ್ಟ್‌

ಬೆಂಗಳೂರು, ಆಗಸ್ಟ್ 30: ಕೆಪಿಎಸ್‌ಸಿ ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಎಸ್‌ ಅಧಿಕಾರಿ ಗ್ಯಾನೇಂದ್ರ ಕುಮಾರ್‌ ಅವರನ್ನು ಬಂಧಿಸಲಾಗಿದೆ. ಕೆಪಿಎಸ್​ಸಿಯಿಂದ ಪಶು ವೈದ್ಯಾಧಿಕಾರಿಗಳ ನೇಮಕದಲ್ಲಿ ಹಗರಣ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಒಂದೆಡೆ ಇಡಿ ಅಧಿಕಾರಿಗಳು, ಕೆಪಿಎಎಸ್ ಮಾಜಿ ಅಧ್ಯಕ್ಷ, ಸದಸ್ಯರು ಹಾಗೂ ಸಂಬಂಧಿಸಿದ ಅಧಿಕಾರಿಗಳ ಮನೆ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದೆ.ಪಶು ವೈದ್ಯಾಧಿಕಾರಿಗಳ ಪರೀಕ್ಷಾ ನಿಯಂತ್ರಕರಾಗಿದ್ದ ಜ್ಞಾನೇಂದ್ರ ಕುಮಾರ್ ಅವರನ್ನ ಸಿಐಡಿ ಅಧಿಕಾರಿಗಳು ಸುದೀರ್ಘ ವಿಚಾರಣೆ ನಡೆಸಿದ್ದು, ಎರಡು ದಿನಗಳ ಬಳಿಕ ಅವರನ್ನ ವಶಕ್ಕೆ ಪಡೆದಿದೆ.ವೈದ್ಯಕೀಯ ತಪಾಸಣೆಗೆ ಒಳಪಡಿಸಿದ ಬಳಿಕ ನ್ಯಾಯಾಲಯದ ಮುಂದೆ ಹಾಜರುಪಡಿಸಿ, ಪ್ರಕರಣದ ಮತ್ತಷ್ಟು ಆಳವಾದ ಮಾಹಿತಿ ಹಾಗೂ ಇತರ ಪ್ರಭಾವಿಗಳ ಪಾತ್ರವನ್ನು ಬಯಲಿಗೆಳೆಯಲು ಹೆಚ್ಚಿನ ದಿನಗಳ ಕಾಲ ತಮ್ಮ ಕಸ್ಟಡಿಗೆ ಪಡೆಯಲು ಸಿಐಡಿ ಸಿದ್ಧತೆ ನಡೆಸಿದೆ.
ಸಿಐಡಿ ತನಿಖೆಗೂ ಮೊದಲೇ ಇಡಿ ಸಹ ಈ ಹಗರಣದಲ್ಲಿ ಪ್ರವೇಶಿಸಿದ್ದು, ಇತ್ತೀಚೆಗಷ್ಟೇ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿವಾಸದ ಮೇಲೆ ದಾಳಿ ಮಾಡಿತ್ತು.ಆದ್ರೆ ಅಂದು ಜ್ಞಾನೇಂದ್ರ ಕುಮಾರ್ ಮನೆಯಲ್ಲಿ ಇರಲಿಲ್ಲ. ಬದಲಿಗೆ ತಮ್ಮ ರಾಜ್ಯ ಉತ್ತರ ಪ್ರದೇಶಕ್ಕೆ ತೆರಳಿದ್ದರು. ಹೀಗಾಗಿ ಅನಿವಾರ್ಯವಾಗಿ ಇಡಿ ಅಧಿಕಾರಿಗಳು ನಕಲಿ ಕೀ ಮಾಡಿಸಿ ಮನೆ ಬಾಗಿಲು ತೆರೆದು ಪರಿಶೀಲನೆ ಮಾಡಿದ್ದರು.
Dailyhunt
Disclaimer: This content has not been generated, created or edited by Dailyhunt. Publisher: themangaloremirror