Dailyhunt Logo
  • Light mode
    Follow system
    Dark mode
    • Play Story
    • App Story
ಮಾಜಿ ಪ್ರಿಯಕರನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾದ ಯುವತಿ

ಮಾಜಿ ಪ್ರಿಯಕರನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾದ ಯುವತಿ

ಪುತ್ತೂರು ಅಕ್ಟೋಬರ್ 29: ಮಾಜಿ ಪ್ರಿಯಕರನ ಕಿರಿಕಿರಿ ತಾಳಲಾರದೇ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪುತ್ತೂರಿನ ಸಂಪ್ಯದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಮಧುಶ್ರೀ(26) ಎಂದು ಗುರುತಿಸಲಾಗಿದ್ದು, ಈಕೆ ತನ್ನ ಅಜ್ಜಿ ಮನೆಯ ಪಕ್ಕದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅದಾಗಲೇ ಬೇರೆ ಮದುವೆಯಾಗಿರುವ ಆಕೆಯ ಮಾಜಿ ಪ್ರಿಯಕರ ಆಕೆಗೆ ನೀಡುತ್ತಿದ್ದ ಮಾನಸಿಕ ಕಿರುಕುಳ ಹಾಗೂ ಜೀವ ಬೆದರಿಕೆಯಿಂದ ಮನನೊಂದು ಅತ್ಮಹತ್ಯೆ ಮಾಡಿಕೊಂಡಿರುವುದಾಗಿ ಆಕೆ ಡೈರಿಯಲ್ಲಿ ಬರೆದಿದ್ದಾಳೆ.


ಮಧುಶ್ರೀ, ಸಂಪಾಜೆ ಗ್ರಾಮದ ಬಂಗ್ಲೆಗುಡ್ಡೆ ಬಾಲಕೃಷ್ಣ ಗೌಡರ ಪುತ್ರಿಯಾಗಿದ್ದು, ಕಳೆದ ನಾಲ್ಕು ವರ್ಷದಿಂದ ಪುತ್ತೂರಿನ ಖಾಸಗಿ ಅಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ದಳು. ಆಸ್ಪತ್ರೆಯ ಹಾಸ್ಟೆಲ್ ನಲ್ಲಿಯೇ ತಂಗಿದ್ದ ಈಕೆ ಆಗಾಗ ಅಜ್ಜಿ ಮನೆಗೆ ತೆರಳುತ್ತಿದ್ದಳು.

ಇದೀಗ ಅಜ್ಜಿ ಮನೆಯ ಪಕ್ಕದ ಕೆರೆಗೆ ಹಾರಿ ಪ್ರಾಣ ಬಿಟ್ಟಿದ್ದಾಳೆ ಎಂದು ತಿಳಿದುಬಂದಿದೆ.

ಈಕೆಯ ಆತ್ಮಹತ್ಯೆಗೆ ದೇವಿಕಿರಣ್ ಎಂಬ ವಿವಾಹಿತನೊಬ್ಬ ನೀಡುತ್ತಿದ್ದ ಕಿರುಕುಳವೇ ಕಾರಣ ಎಂದು ಮಧುಶ್ರೀ ತನ್ನ ಬ್ಯಾಗ್ ನಲ್ಲಿದ್ದ ಡೈರಿಯಲ್ಲಿ ಬರೆದುಕೊಂಡಿದ್ದಾಳೆ. ನಾನು ಹಾಗೂ ಸಂಪಾಜೆಯ ದೇವಿಚರಣ್ ಕಳೆದ 5 ವರ್ಷಗಳಿಂದ ಪ್ರೀತಿಸುತ್ತಿದ್ದೆವು. ಆದರೆ, ಕಳೆದ ಜೂನ್ ನಲ್ಲಿ ಆತನಿಗೆ ಬೇರೊಂದು ಯುವತಿಯೊಂದಿಗೆ ವಿವಾಹವಾಗಿತ್ತು. ಹೀಗಿದ್ದರೂ ಆತ ನನ್ನ ಜೊತೆ ಸಂಪರ್ಕದಲ್ಲಿದ್ದ. ನನಗೆ ಬೇರೆಯವರನ್ನು ಮದುವೆಯಾಗದಂತೆ ಒತ್ತಾಯ ಮಾಡುತ್ತಿದ್ದ. ಮದುವೆಯಾಗಲು ಪ್ರಯತ್ನಿಸಿದರೆ ನನಗೂ-ನಿನಗೂ ಸಂಬಂಧವಿದೆ ಎಂದು ಯುವಕನಿಗೆ ತಿಳಿಸಿ ಮದುವೆ ತಪ್ಪಿಸುವುದಾಗಿ ಬೆದರಿಸಿದ್ದ. ಅಂತೂ ಒಂದು ವೇಳೆ ಮದುವೆಯಾದರೆ ಕೊಲೆ ಮಾಡುವುದಾಗಿಯೂ ಬೆದರಿಕೆ ಹಾಕುತ್ತಿದ್ದ' ಎಂದು ಆಕೆ ಡೈರಿಯಲ್ಲಿ ಬರೆದುಕೊಂಡಿದ್ದಾರೆ.
ಮಧುಶ್ರೀ ಆತ್ಮಹತ್ಯೆಗೆ ದೇವಿಚರಣ್ ಕಿರುಕುಳವೇ ಕಾರಣ ಎಂದು ಮಧುಶ್ರೀ ಮಾವ ವಿಠಲ್ ಗೌಡ ಅವರು ಸಂಪ್ಯ ಪೊಲೀಸರಿಗೆ ದೂರು ನೀಡಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಸಂಪ್ಯ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ

Dailyhunt
Disclaimer: This content has not been generated, created or edited by Dailyhunt. Publisher: themangaloremirror