Dailyhunt Logo
  • Light mode
    Follow system
    Dark mode
    • Play Story
    • App Story
ಮಂಗಳೂರು ರೈಲ್ವೇ ಮೈಸೂರು ವಿಭಾಗಕ್ಕೆ ಸೇರ್ಪಡೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ - ಸಂಸದ ಕೋಟ ಶ್ರೀನಿವಾಸ ಪೂಜಾರಿ

ಮಂಗಳೂರು ರೈಲ್ವೇ ಮೈಸೂರು ವಿಭಾಗಕ್ಕೆ ಸೇರ್ಪಡೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ - ಸಂಸದ ಕೋಟ ಶ್ರೀನಿವಾಸ ಪೂಜಾರಿ

ಡುಪಿ ಅಗಸ್ಟ್ 28: ಕೇರಳದ ಪಾಲಕ್ಕಾಡ್ ವಿಭಾಗದಲ್ಲಿದ್ದ ಮಂಗಳೂರು ರೈಲ್ವೆ ವ್ಯವಸ್ಥೆಯನ್ನು ನೈಋತ್ಯ ರೈಲ್ವೆಯ (SWR) ಮೈಸೂರು ವಿಭಾಗಕ್ಕೆ ವಿಲೀನಗೊಳಿಸುವ ಕೇಂದ್ರ ರೈಲ್ವೆ ಸಚಿವಾಲಯದ ನಿರ್ಧಾರ ಅಧಿಕೃತಗೊಂಡಿದ್ದು, ಈ ವಿಷಯದಲ್ಲಿ ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ಕೇರಳ ಸರ್ಕಾರದ ಪ್ರತಿಭಟನೆ ಹಾಗೂ ವಿರೋಧದ ನಡುವೆಯೂ ಕರ್ನಾಟಕಕ್ಕೆ ಸಿಗಬೇಕಾದ ನ್ಯಾಯಯುತ ರೈಲ್ವೆ ಅಧಿಕಾರವನ್ನು ಕೇಂದ್ರ ಸರ್ಕಾರ ಎತ್ತಿಹಿಡಿದಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು ಕೇರಳದ ಪಾಲಕ್ಕಾಡ್ ವಿಭಾಗದಲ್ಲಿದ್ದ ಮಂಗಳೂರು ರೈಲ್ವೆ ವ್ಯವಸ್ಥೆಯನ್ನು ನಮ್ಮದೇ ರಾಜ್ಯದ ಮೈಸೂರು ವಿಭಾಗಕ್ಕೆ ಸೇರಿಸುವಲ್ಲಿ ನಮ್ಮ ಪ್ರಧಾನಿ ನರೇಂದ್ರ ಮೋದಿಯವರು, ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಹಾಗೂ ಮೈಸೂರು ವಿಭಾಗಕ್ಕೆ ತರಲು ಶ್ರಮವಹಿಸಿ ದುಡಿದ ಶ್ರೀ ವಿ.ಸೋಮಣ್ಣರವರಿಗೆ ಅಭಿನಂದನೆಗಳನ್ನು ಹೇಳಿದ್ದೆ.ಕರಾವಳಿ ಭಾಗದ ಹಾಲಿ ಸಂಸದರು ಹಾಗೂ ಹಿಂದಿನ ಸಂಸದರ ಯೋಚನೆಯು ಈ ಯೋಜನೆಗಿದೆ. ನೋವಿನ ಸಂಗತಿಯೆಂದರೆ, ಈಗಾಗಲೇ ಇದರ ವಿರುದ್ಧ ಕೇರಳ ಸರ್ಕಾರ ಪ್ರತಿಭಟನೆ ವ್ಯಕ್ತಪಡಿಸಿದ್ದು, ಸದ್ಯ ಕೇಂದ್ರ ಸರ್ಕಾರ ಈ ಆದೇಶವನ್ನು ಅಧಿಕೃತವಾಗಿ ನೀಡಿಯಾಗಿದ್ದು ರಾಜ್ಯ ಸರ್ಕಾರದ ಯಾವುದೇ ಪಾತ್ರದ ಇಲ್ಲದಿದ್ದಾಗಿಯೂ, ಮೋದಿ ಸರ್ಕಾರ ರೈಲ್ವೇ ವಿಚಾರದಲ್ಲಿ ರಾಜ್ಯಕ್ಕೆ ನ್ಯಾಯದ ಅವಕಾಶ ಕೊಟ್ಟಿದೆ. ಈ ಮಧ್ಯೆ ಇಂದು ಸಚಿವರಾದ ಶ್ರೀ ವಿ.ಸೋಮಣ್ಣರವರು ನನಗೆ ದೂರವಾಣಿ ಕರೆಮಾಡಿ ಕೇರಳ ಸರ್ಕಾರದ ಬೆದರಿಕೆಗೆ ಇಲಾಖೆ ಮಣಿಯುವುದಿಲ್ಲ ಎಂದು, ಕರ್ನಾಟಕ ರಾಜ್ಯದ ಜನ ಆತಂಕ ಪಡುವ ಅಗತ್ಯವಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ. ಕೇರಳ ಸರ್ಕಾರ ಮತ್ತು ಅಲ್ಲಿನ ಸಂಸದರು ಎಷ್ಟೇ ವಿರೋಧಿಸಿದರೂ ನಮ್ಮ ನಿಲುವಿನಲ್ಲಿ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಇದು ಕೇವಲ ಕರಾವಳಿ ಭಾಗದ ಪ್ರಶ್ನೆಯಲ್ಲ, ಇದರಿಂದಾಗಿ ರಾಜ್ಯದ ಬೊಕ್ಕಸಕ್ಕೆ ಸಾಕಷ್ಟು ಆದಾಯ ಬರುತ್ತದೆ.ನಮ್ಮ ಭಾಗದ ರೈಲ್ವೆ ಅಭಿವೃದ್ಧಿಗೂ ಇದರಿಂದ ಬಹದೊಡ್ಡ ಕೊಡುಗೆ ಆಗಲಿದೆ. ಮುಂದಿನ ದಿನಗಳಲ್ಲಿ ಕೊಂಕಣ ರೈಲ್ವೆ ಭಾರತೀಯ ರೈಲ್ವೆ ಜೊತೆಗೆ ವಿಲೀನ, ರೈಲ್ವೆ ಹಳಿ ಡಬಲಿಂಗ್, ಹೊಸ ರೈಲು ಯೋಜನೆ ಸೇರಿದಂತೆ ಅನೇಕ ಯೋಜನೆಗಳ ಕುರಿತು ನಮ್ಮ ಪ್ರಯತ್ನವನ್ನು ಮುಂದುವರಿಸಲಾಗುತ್ತದೆ. ಎಂದಿದ್ದಾರೆ.
Dailyhunt
Disclaimer: This content has not been generated, created or edited by Dailyhunt. Publisher: themangaloremirror