Dailyhunt Logo
  • Light mode
    Follow system
    Dark mode
    • Play Story
    • App Story
ಪಿಂಚಣಿಗಾಗಿ ಲಂಚ: ಕಲ್ಲಿಹಾಳ್‌ ಉಪ ತಹಶೀಲ್ದಾರ್‌ ಪುಷ್ಪಲತಾಗೆ 4 ವರ್ಷ ಜೈಲು

ಪಿಂಚಣಿಗಾಗಿ ಲಂಚ: ಕಲ್ಲಿಹಾಳ್‌ ಉಪ ತಹಶೀಲ್ದಾರ್‌ ಪುಷ್ಪಲತಾಗೆ 4 ವರ್ಷ ಜೈಲು

ಶಿವಮೊಗ್ಗ, ಸೆಪ್ಟೆಂಬರ್ 02: ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದ ಕಲ್ಲಿಹಾಳ್‌ ನಾಡಕಚೇರಿ ಉಪ ತಹಶೀಲ್ದಾರ್‌ ಪುಷ್ಪಲತಾಗೆ ಶಿವಮೊಗ್ಗ ಜಿಲ್ಲಾ ಮತ್ತು ವಿಶೇಷ ನ್ಯಾಯಾಲಯ 40,000 ರೂ. ದಂಡ ಹಾಗೂ 4 ವರ್ಷ ಜೈಲು ಶಿಕ್ಷೆ ವಿಧಿಸಿದೆ.ಹುಟ್ಟು ಮೂಕನಾಗಿರುವ ತಂದೆಗೆ ಅಂಗವಿಕಲರ ಪಿಂಚಣಿ ಕೊಡಿಸಲು ಮುಂದಾಗಿದ್ದ ಡಿ.ಬಿ.
ಹಳ್ಳಿಯ ನಿವಾಸಿ ಗಿರೀಶ್‌ ಅವರ ಬಳಿ ಅಪರಾಧಿ ಪುಷ್ಪಲತಾ 10,000 ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದಳು. ಅದರಂತೆ ಮುಂಗಡವಾಗಿ 2017ರ ಸೆಪ್ಟೆಂಬರ್ 21 ರಂದು 5,000 ರೂ. ಲಂಚ ಪಡೆಯುವಾಗ ಕಚೇರಿಯಲ್ಲಿ ರೆಡ್‌ಹ್ಯಾಂಡ್‌ ಆಗಿ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಳು.ತನಿಖಾಧಿಕಾರಿಯಾಗಿದ್ದ ಪೊಲೀಸ್ ಇನ್ಸ್‌ಪೆಕ್ಟರ್‌ ಹೆಚ್.ಎಸ್.ತಿಪ್ಪೇಸ್ವಾಮಿ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಶಿವಮೊಗ್ಗದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಹಾಗೂ ವಿಶೇಷ ನ್ಯಾಯಾಲಯವು ಅಪರಾಧಿಗೆ 4 ವರ್ಷ ಜೈಲು ಶಿಕ್ಷೆ ಹಾಗೂ ದಂಡವನ್ನ ವಿಧಿಸಿ ತೀರ್ಪು ಪ್ರಕಟಿಸಿದೆ. ಸರ್ಕಾರದ ಪರವಾಗಿ ವಿಶೇಷ ಸಾರ್ವಜನಿಕ ಅಭಿಯೋಜಕರಾದ ಸುಂದರ್‌ ರಾಜ್‌ ಅವರು ವಾದ ಮಂಡಿಸಿದ್ದರು.
Dailyhunt
Disclaimer: This content has not been generated, created or edited by Dailyhunt. Publisher: themangaloremirror