ಪುತ್ತೂರು ಜುಲೈ 08: ಪುತ್ತೂರು ಭೂ ನ್ಯಾಯ ಮಂಡಳಿ ಸದಸ್ಯ ನಿರಂಜನ ರೈ ಮಠಂದಬೆಟ್ಟು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಪುತ್ತೂರು ಸಹಾಯಕ ಆಯುಕ್ತರ ಕಛೇರಿಯಲ್ಲಿ ನಡೆಯುತ್ತಿದ್ದ ಮಂಡಳಿ ಸಭೆಯಲ್ಲಿ ಪಾಲ್ಗೊಂಡಿದ್ದ ಸಂದರ್ಭದಲ್ಲಿ ಅವರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
ಪುತ್ತೂರು ಭೂನ್ಯಾಯ ಮಂಡಳಿ ಸದಸ್ಯರಾಗಿದ್ದ ಅವರು ಬನ್ನೂರು ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷರಾಗಿ, ಬಂಟರ ಸಂಘದಲ್ಲಿ ಸಕ್ರಿಯವಾಗಿದ್ದರು. ಕಂಬಳ ಸ್ಪರ್ಧೆಗಳಲ್ಲಿ ವೀಕ್ಷಕ ವಿವರಣೆಗಾರರಾಗಿ ಪರಿಚಿತರಾಗಿದ್ದರು. ಕಂಬಳದ ಕುರಿತು ಹೊಂದಿದ್ದ ಅಪಾರ ಜ್ಞಾನ, ಸ್ಪಷ್ಟ ನಿರೂಪಣೆ ಹಾಗೂ ವಿಶಿಷ್ಟ ಶೈಲಿಯಿಂದ ಕಂಬಳ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದರು.ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ನಿರಂಜನ್ ರೈ ಮಠಂತಬೆಟ್ಟು ನಿಧನ ಶಾಸಕ ಅಶೋಕ್ ರೈ ಸಂತಾಪತನ್ನ ಒಡನಾಡಿಯೂ,ಆತ್ಮೀಯರೂ ಆಗಿದ್ದ ಪುತ್ತೂರು ಭೂ ನ್ಯಾಯ ಮಂಡಳಿಯ ಸದಸ್ಯರಾದ ನಿರಂಜನ್ ರೈ ಮಠಂತಬೆಟ್ಟು ನಿಧನಕ್ಕೆ ಶಾಸಕ ಆಶೋಕ್ ರೈ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮಟಂತಬೆಟ್ಟು ಮಹಿಷಮರ್ಧಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ,ಜಿಲ್ಲಾ ಕಂಬಳ ಸಮಿತಿ ಉಪಾಧ್ಯಕ್ಷರಾಗಿ, ಕಂಬಳದ ವೀಕ್ಷಕ ವಿವರಣೆ ಹಾಗೂ ತೀರ್ಪುಗಾರರಾಗಿ ಅಪಾರ ಸೇವೆ ಸಲ್ಲಿಸಿದ್ದ ಮೃತರು ಮೃದು ಸ್ವಭಾವನ ಸಜ್ಜನ ವ್ಯಕ್ತಿಯೂ ಆಗಿದ್ದರು. ಮೃತರ ಕುಟುಂಬಕ್ಕೆ ನೋವನ್ನು ಸಹಿಸುವ ಶಕ್ತಿ ಭಗವಂತ ಕರುಣಿಸಲಿ ಎಂದು ಶಾಸಕರು ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ. ಇವರ ನಿಧನದ ಹಿನ್ನೆಲೆಯಲ್ಲಿ ಬೆಂಗಳೂರಿನ ಕಾರ್ಯಕ್ರಮ ಮೊಟಕುಗೊಳಿಸಿ ಶಾಸಕರು ಇಂದು ರಾತ್ರಿ ಆಗಮಿಸಿ ಮೃತರ ಅಂತಿಮ ದರ್ಶನ ಪಡೆಯಲಿದ್ದಾರೆ

