Dailyhunt Logo
  • Light mode
    Follow system
    Dark mode
    • Play Story
    • App Story
ಪುತ್ತೂರು: ಶತಾಯುಷಿ, ನಿವೃತ್ತ ತಹಶೀಲ್ದಾರ್ ಬಿ.ಎಸ್. ಕುಲಾಲ್ ಇನ್ನಿಲ್ಲ

ಪುತ್ತೂರು: ಶತಾಯುಷಿ, ನಿವೃತ್ತ ತಹಶೀಲ್ದಾರ್ ಬಿ.ಎಸ್. ಕುಲಾಲ್ ಇನ್ನಿಲ್ಲ

ಪುತ್ತೂರು ಅಗಸ್ಟ್ 30: ಪುತ್ತೂರಿನ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ಮಾಜಿ ಅಧ್ಯಕ್ಷ, ಹಾಲಿ ನಿರ್ದೇಶಕ ಹಾಗೂ ನಿವೃತ್ತ ತಹಶೀಲ್ದಾ‌ರ್, ಶತಾಯುಷಿ ಬಿ.ಎಸ್. ಕುಲಾಲ್ (100) ಅವರು ಆಗಸ್ಟ್ 30ರಂದು ನಿಧನರಾದರು. ಕಂದಾಯ ಇಲಾಖೆಯಲ್ಲಿ ತಹಶೀಲ್ದಾರ್ ಆಗಿ ದೀರ್ಘಕಾಲ ದಕ್ಷ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಅವರು, ಸಹಕಾರ ಹಾಗೂ ಸಾರ್ವಜನಿಕ ಕ್ಷೇತ್ರಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ಪುತ್ತೂರಿನ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ಅಧ್ಯಕ್ಷರಾಗಿ ಹಾಗೂ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಗಣನೀಯ ಕೊಡುಗೆ ನೀಡಿದ್ದರು.ಮೃತ ಬಿ.ಎಸ್. ಕುಲಾಲ್ ಅವರ ಭೌತಿಕ ಶರೀರದ ಅಂತಿಮ ಸಾರ್ವಜನಿಕ ದರ್ಶನಕ್ಕೆ ಆ.30ರಂದು ಮಧ್ಯಾಹ್ನ 2.30ರಿಂದ ಪುತ್ತೂರು ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ಆವರಣದಲ್ಲಿ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕ ದರ್ಶನದ ಬಳಿಕ ಸಂಜೆ ಪುತ್ತೂರು ಸ್ಮಶಾನದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಸಹಕಾರ ಸಂಘದ ಅಧ್ಯಕ್ಷ ಭಾಸ್ಕ‌ರ್ ಪೆರುವಾಯಿ ತಿಳಿಸಿದ್ದಾರೆ. ಮೃತರು ಇಬ್ಬರು ಪುತ್ರರು, ಓರ್ವ ಪುತ್ರಿ, ಸೊಸೆ, ಅಳಿಯಂದಿರು ಹಾಗೂ ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.
Dailyhunt
Disclaimer: This content has not been generated, created or edited by Dailyhunt. Publisher: themangaloremirror