ಸುಳ್ಯ, ಮೇ 17 : ವೇಗವಾಗಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಪಲ್ಟಿಯಾದ ಘಟನೆ ಸುಳ್ಯದ ಪೆರಾಜೆ ಸಮೀಪ ಮಾಣಿ ಮೈಸೂರು ಹೆದ್ದಾರಿಯಲ್ಲಿ 16 ರಂದು ಸಂಜೆ ನಡೆದಿದೆ.ಸುಳ್ಯದಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಾರು ಇದಾಗಿದ್ದು ಕಾರಿನಲ್ಲಿ ಚಾಲಕ ಸೇರಿ ಮೂವರು ಪ್ರಯಾಣಿಕರು ಇದ್ದರು ಎಂದು ತಿಳಿದು ಬಂದಿದೆ.ಕಾರಿನಲಿದ್ದ ಮೂವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ತಕ್ಷಣವೇ ಸುಳ್ಯದ ಕೆ.ವಿ.ಜಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

