Dailyhunt Logo
  • Light mode
    Follow system
    Dark mode
    • Play Story
    • App Story
ಉಡುಪಿ: ಕಲ್ಯಾಣಪುರ ಸಂತೆಕಟ್ಟೆಯಲ್ಲಿ ರಸ್ತೆಗೆ ಉರುಳಿದ ಬೃಹತ್ ಮರ

ಉಡುಪಿ: ಕಲ್ಯಾಣಪುರ ಸಂತೆಕಟ್ಟೆಯಲ್ಲಿ ರಸ್ತೆಗೆ ಉರುಳಿದ ಬೃಹತ್ ಮರ

ಡುಪಿ ಜುಲೈ 22: ಕಲ್ಯಾಣಪುರ ಸಂತೆಕಟ್ಟೆ ಪ್ರದೇಶದಲ್ಲಿ ಬೃಹತ್ ಗಾತ್ರದ ಮರವೊಂದು ಏಕಾಏಕಿ ರಸ್ತೆಗೆ ಧರೆಗುರುಳಿದ ಘಟನೆ ನಡೆದಿದೆ. ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುವ ಸರ್ವಿಸ್ ರಸ್ತೆಯ ಮೇಲೆ ಮರ ಬಿದ್ದಿದ್ದರಿಂದ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿ ಸುಮಾರು ಒಂದು ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತು.ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಮರವನ್ನು ತೆರವುಗೊಳಿಸಿ ಸಂಚಾರವನ್ನು ಸುಗಮಗೊಳಿಸಿದರು.
ಜಿಲ್ಲೆಯಲ್ಲಿ ಸಾಧಾರಣ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಈ ಘಟನೆ ಸಂಭವಿಸಿದ್ದು, ಯಾವುದೇ ಪ್ರಾಣಾಪಾಯ ಅಥವಾ ಗಾಯಗಳ ಬಗ್ಗೆ ವರದಿಯಾಗಿಲ್ಲ.
Dailyhunt
Disclaimer: This content has not been generated, created or edited by Dailyhunt. Publisher: themangaloremirror