Dailyhunt Logo
  • Light mode
    Follow system
    Dark mode
    • Play Story
    • App Story
ವಿಟ್ಲ ಪೊಲೀಸರ ಭರ್ಜರಿ ಕಾರ್ಯಾಚರಣೆ: 3 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ವಾರಂಟ್ ಆರೋಪಿ ಮಂಗಳೂರಿನಲ್ಲಿ ಬಂಧನ!

ವಿಟ್ಲ ಪೊಲೀಸರ ಭರ್ಜರಿ ಕಾರ್ಯಾಚರಣೆ: 3 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ವಾರಂಟ್ ಆರೋಪಿ ಮಂಗಳೂರಿನಲ್ಲಿ ಬಂಧನ!

ವಿಟ್ಲ ಜುಲೈ 08: ಕಳ್ಳತನ ಪ್ರಕರಣವೊಂದರಲ್ಲಿ ಭಾಗಿಯಾಗಿ ಕಳೆದ ಮೂರು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಖದೀಮನನ್ನು ವಿಟ್ಲ ಪೊಲೀಸರು ಮಂಗಳೂರಿನಲ್ಲಿ ಸಿನಿಮೀಯ ಶೈಲಿಯಲ್ಲಿ ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳ್ತಂಗಡಿ ಮೂಲದ ನಿವಾಸಿ ರಾಜೇಶ್ (41) ಬಂಧಿತ ವಾರಂಟ್ ಆರೋಪಿ.
ಬಂಧಿತ ಆರೋಪಿ ರಾಜೇಶ್ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಕಳೆದ 2018ನೇ ಇಸವಿಯಲ್ಲಿ ನಡೆದ ಕಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಜಾಮೀನು ಪಡೆದ ಬಳಿಕ ಆರೋಪಿಯು ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ, ಕಳೆದ 3 ವರ್ಷಗಳಿಂದ ತಲೆಮರೆಸಿಕೊಂಡು ಅಲೆದಾಡುತ್ತಿದ್ದನು. ಈತನ ಪತ್ತೆಗಾಗಿ ಮಾನ್ಯ ನ್ಯಾಯಾಲಯವು ದಸ್ತಗಿರಿ ವಾರಂಟ್ ಜಾರಿಗೊಳಿಸಿತ್ತು.ವಾರಂಟ್ ಆರೋಪಿಗಳ ಪತ್ತೆಗಾಗಿ ತೀವ್ರ ಜಾಲ ಬೀಸಿದ್ದ ವಿಟ್ಲ ಪೊಲೀಸ್ ಠಾಣಾ ಅಧಿಕಾರಿಗಳ ಮಾರ್ಗದರ್ಶನದಂತೆ, ಠಾಣಾ ಸಹಾಯಕ ಉಪನಿರೀಕ್ಷಕ (ASI) ಜಯರಾಮ ಮತ್ತು ಸಿಬ್ಬಂದಿಗಳಾದ ಸಿಪಿಸಿ (CPC) 2355 ವೆಂಕಪ್ಪ ಹಾಗೂ ಸಿಪಿಸಿ 2462 ಶಿವಾನಂದ ಅವರನ್ನೊಳಗೊಂಡ ವಿಶೇಷ ತಂಡವು ಖಚಿತ ಮಾಹಿತಿಯ ಮೇರೆಗೆ ದಿನಾಂಕ: 06/07/2026 ರಂದು ಮಂಗಳೂರಿನಲ್ಲಿ ಆರೋಪಿಯನ್ನು ಸುತ್ತುವರಿದು ಬಂಧಿಸಿದೆ. ದಸ್ತಗಿರಿ ಮಾಡಲಾದ ಆರೋಪಿಯನ್ನು ವಿಟ್ಲ ಪೊಲೀಸರು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿತನಿಗೆ ನ್ಯಾಯಾಂಗ ಬಂಧನ ವಿಧಿಸಿ ಜೈಲಿಗಟ್ಟಿದೆ
Dailyhunt
Disclaimer: This content has not been generated, created or edited by Dailyhunt. Publisher: themangaloremirror