Dailyhunt
'ಗುಜರಾತಿಗಳು ಅನಕ್ಷರಸ್ಥರು' ಎಂಬರ್ಥದಲ್ಲಿ ನೀಡಿರುವ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ, ವಿಷಾದ ವ್ಯಕ್ತಪಡಿಸಿದ AICC ಅಧ್ಯಕ್ಷ

'ಗುಜರಾತಿಗಳು ಅನಕ್ಷರಸ್ಥರು' ಎಂಬರ್ಥದಲ್ಲಿ ನೀಡಿರುವ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ, ವಿಷಾದ ವ್ಯಕ್ತಪಡಿಸಿದ AICC ಅಧ್ಯಕ್ಷ

TimesNowSuddi 1 day ago

ಬೆಂಗಳೂರು : ಚುನಾವಣೆ ಸಂದರ್ಭದಲ್ಲಿ ಅನೇಕರು ನಾನಾ ರೀತಿಯ ಹೇಳಿಕೆ ನೀಡಿ ವಿವಾದ ಸೃಷ್ಟಿಸುತ್ತಲೇ ಇದ್ದಾರೆ. ಅದೇ ರೀತಿಯಲ್ಲಿ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನೀಡಿರುವ ಹೇಳಿಕೆ ಇದೀಗ ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಗುಜರಾತಿಗಳು ಅನಕ್ಷರಸ್ಥರು ಎಂಬರ್ಥದಲ್ಲಿ ನೀಡಿರುವ ಹೇಳಿಕೆ ಇದೀಗ ಸಾಕಷ್ಟು ವಿವಾದವನ್ನೇ ಸೃಷ್ಟಿ ಮಾಡಿದೆ.

ರಾಜಕೀಯ ವಲಯದಲ್ಲಂತೂ ಅದರಲ್ಲೂ ಬಿಜೆಪಿ ಮುಂಖಡರು ಖರ್ಗೆ ಅವರನ್ನು ಸಾಕಷ್ಟು ತರಾಟೆಗೆ ತೆಗೆದುಕೊಂಡಿದ್ದರು.

ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಗೆ ಒಳಗಾಗುತ್ತಿದ್ದಂತೆ ಮಲ್ಲಿಕಾರ್ಜುನ ಖರ್ಗೆ ಅವರು, ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿದ್ದು, ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

'ಇತ್ತೀಚೆಗೆ ಕೇರಳದಲ್ಲಿ ನಡೆದ ಚುನಾವಣಾ ಭಾಷಣದಲ್ಲಿ ನಾನು ಮಾಡಿದ ಕೆಲವು ಹೇಳಿಕೆಗಳನ್ನು ಉದ್ದೇಶಪೂರ್ವಕವಾಗಿ ತಪ್ಪಾಗಿ ಅರ್ಥೈಸಲಾಗುತ್ತಿದೆ. ಹಾಗಿದ್ದರೂ, ನಾನು ನನ್ನ ಪ್ರಾಮಾಣಿಕ ವಿಷಾದವನ್ನು ವ್ಯಕ್ತಪಡಿಸುತ್ತೇನೆ. ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ, ಅವರ ಬಗ್ಗೆ ನನಗೆ ಯಾವಾಗಲೂ ಗೌರವವಿದೆ ಮತ್ತು ಮುಂದೆಯೂ ಅವರೇ ಇರುತ್ತಾರೆ' ಎಂದು ಖರ್ಗೆ ಅವರು ತಮ್ಮ ಹೇಳಿಕೆ ನೀಡಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಅವರು ಏನು ಹೇಳಿದ್ದರು ?

ಎರಡು ದಿನಗಳ ಹಿಂದೆ ಕೇರಳದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದರು. ಈ ಹೇಳಿಕೆ ತೀವ್ರ ವಿವಾದದ ಸ್ವರೂಪ ಪಡೆದುಕೊಂಡಿತ್ತು. ಗುಜರಾತಿಗಳನ್ನು ಅನಕ್ಷರಸ್ತರು ಎಂದರ್ಥದ ಹೇಳಿಕೆ ನೀಡಿದ್ದರು. ಪ್ರಧಾನಿ ನರೇಂದ್ರ ಮೋದಿಯವರು ಅಲ್ಲಿನ ಜನರನ್ನು ಸುಲಭವಾಗಿ ದಾರಿ ತಪ್ಪಿಸಬಹುದು. ಆದರೆ, ಕೇರಳ ಜನರು ಸಂವೇದನಾಶೀಲರು ಮತ್ತು ವಿದ್ಯಾವಂತರು. ಹಾಗಾಗಿ ಅವರನ್ನು ಯಾವುದೇ ಕಾರಣಕ್ಕೂ ದಾರಿ ತಪ್ಪಿಸಲು ಸಾಧ್ಯವಿಲ್ಲ ಎಂದು ಹೇಳಿದ್ದರು.
Metro Pink Line Update: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬ್ಯಾಡ್ ನ್ಯೂಸ್ : ಬಹುನಿರೀಕ್ಷಿತ ಪಿಂಕ್ ಲೈನ್ ಮೇ ತಿಂಗಳಲ್ಲಿ ಸಂಚಾರಕ್ಕೆ ಸಿಗಲ್ವಂತೆ! ಕಾರಣವೇನು ನೋಡೋಣ...
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಒಂದು ದಾರಿಯಲ್ಲಿದ್ದಾರೆ. ಆದರೆ ಅವರ ನಡುವೆ ಕೇವಲ , ಒಂದೇ ಒಂದು ವ್ಯತ್ಯಾಸವಿದೆ. ಪಿಣರಾಯಿ ವಿಜಯನ್ ಅವರು ಪರೋಕ್ಷವಾಗಿ ನರೇಂದ್ರ ಮೋದಿಯವರ ನಿಯಂತ್ರಣದಲ್ಲಿದ್ದಾರೆ ಮತ್ತು ಅದೇ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಪ್ರಚಾರದ ಸಂದರ್ಭದಲ್ಲಿ ಆರೋಪಿಸಿದ್ದರು.

ಒಂದು ರಾಜ್ಯದ ಜನರ ಕುರಿತಾಗಿ ಇಂತಹ ಹೇಳಿಕೆಗಳನ್ನು ನೀಡುವುದು ಸರಿಯಲ್ಲ ಎಂಬ ಅಭಿಪ್ರಾಯಗಳು ಸಾಮಾಜಿಕ ಜಾಲತಾಣದಲ್ಲಿ ಮತ್ತು ಬಿಜೆಪಿ ಮುಖಂಡರು ವ್ಯಕ್ತಪಡಿಸಿದ್ದರು. ಟೀಕೆಗಳು ಹಾಗೂ ರಾಜಕೀಯ ನಾಯಕರುಗಳು ಹೇಳಿಕೆಗಳು ವ್ಯಾಪಕವಾಗಿ ಕೇಳಿಬಂದ ಹಿನ್ನೆಲೆಯಲ್ಲಿ ಇದೀಗ ಮಲ್ಲಿಕಾರ್ಜುನ ಖರ್ಗೆ ಅವರು ವಿಷಾದ ವ್ಯಕ್ತಪಡಿಸಿದ್ದಾರೆ.

ಆರ್ ಎಸ್ ಎಸ್ ವಿಷ ಸರ್ಪ

ಇದೇ ಸಂದರ್ಭದಲ್ಲಿ ಆರ್‌ ಎಸ್ ಎಸ್ ವಿಷಸರ್ಪ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದರು. ಇದು ಕೂಡಾ ತೀವ್ರ ವಿರೋಧಕ್ಕೆ ಕಾರಣವಾಗಿತ್ತು. ಈ ಬಗ್ಗೆ ರಾಜ್ಯ ಬಿಜೆಪಿ ನಾಯಕರು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಹೇಳಿಕೆಯನ್ನು ಸಚಿವ ಪ್ರಿಯಾಂಕ್ ಖರ್ಗೆ ಸಮರ್ಥಿಸಿಕೊಂಡಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ನಾಲಿಗೆಯನ್ನು ಹದ್ದುಬಸ್ತಿನಲ್ಲಿ ಇಟ್ಟುಕೊಳ್ಳಬೇಕು. ಅರಳು- ಮರಳು ರೀತಿ ಮಾತನಾಡಬಾರದು. ಇವರ ಮಾನಸಿಕ ಆರೋಗ್ಯ ಸರಿ ಇಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಿಡಿಕಾರಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು ಬಿಜೆಪಿ ಮತ್ತು ಆರ್‍ಎಸ್‍ಎಸ್ ವಿರುದ್ಧ ಪ್ರಚೋದನಾಕಾರಿ ಹೇಳಿಕೆ ನೀಡಿರುವುದು ಖಂಡನೀಯ ಎಂದಿದ್ದಾರೆ. ಈ ಸಂಬಂಧ ಈಗಾಗಲೇ ದೂರು ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

Read more news like this on kannada.timesnownews.com

Dailyhunt
Disclaimer: This content has not been generated, created or edited by Dailyhunt. Publisher: TimesNowSuddi