Tuesday, 18 Aug, 12.34 pm TV5 ಕನ್ನಡ

ರಾಜ್ಯ
ಬಿಜೆಪಿ ಶಾಸಕರಿಗೆ ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ಎಚ್ಚರಿಕೆ

ದಾವಣಗೆರೆ: ನೀವು ಸಚಿವರಾದ್ರು ಆಗಿ ಏನಾದರು ಮಾಡಿಕೊಳ್ಳಿ ಆದರೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಅವರ ಮೇಲೆ ಇಲ್ಲಸಲ್ಲದ ಆರೋಪ ಮಾಡಿ ಅವರನ್ನು ಬದಲಾಯಿಸಲು ನೋಡಿದ್ರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ಅವರು ಎಚ್ಚರಿಕೆ ನೀಡಿದ್ದಾರೆ.

ಮಂಗಳವಾರ ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಬೆಳ್ಳೋಡಿ ಕಾಗಿನೆಲೆ ಕನಕ ಪೀಠದಲ್ಲಿ ಮಾತನಾಡಿರುವ ಅವರು, ಸಚಿವ ಭೈರತಿ ಬಸವರಾಜ್ ಬಗ್ಗೆ ಗಂಭೀರ ಆರೋಪ ಮಾಡಿ ಉಸ್ತುವಾರಿಯಿಂದ ತೆಗೆಸಲು ದಾವಣಗೆರೆಯ ಕೆಲ ಬಿಜೆಪಿ ಶಾಸಕರು ಅವಣಿಸುತ್ತಿದ್ದಾರೆ ಎಂದಿದ್ದಾರೆ.

ಸದ್ಯ ಇದು ಒಳ್ಳೆಯ ಬೆಳವಣಿಗೆ ಅಲ್ಲ, ಈ ಬಗ್ಗೆ ನಾನು ದಾವಣಗೆರೆ ಜಿಲ್ಲೆಯ ಬಿಜೆಪಿ ಶಾಸಕರಿಗೆ ನೇರ ಎಚ್ಚರಿಕೆ ನೀಡುವೆ ಎಂದು ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ದಾವಣಗೆರೆ ಜಿಲ್ಲೆಯ ಬಿಜೆಪಿ ಶಾಸಕರ ವಿರುದ್ಧ ಗುಡುಗಿದ್ದಾರೆ.

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: TV5 Kannada
Top