Tuesday, 24 Nov, 10.34 am TV5 ಕನ್ನಡ

ದೇಶ-ವಿದೇಶ
COVID 19 India Updates: ದೇಶದಾದ್ಯಂತ ಕಳೆದ 24 ಗಂಟೆಯಲ್ಲಿ 42,314 ಸೋಂಕಿನಿಂದ ಗುಣಮುಖರಾಗಿದ್ದಾರೆ

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 37,975 ಹೊಸ ಕೋವಿಡ್​ 19 ಪ್ರಕರಣಗಳು ಪತ್ತೆಯಾಗಿದ್ದು, ಇದೇ ಈ ಅವಧಿಯಲ್ಲಿ ಸೋಂಕಿನಿಂದ 480 ಮಂದಿ ಸಾವನ್ನಪ್ಪಿದ್ದಾರೆ.

ಇಂದು ಬೆಳಗ್ಗೆ ವರೆಗೂ ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 91,77,841 ತಲುಪಿದ್ದು, ಈ ಪೈಕಿ 86,04,955 ಮಂದಿ ಗುಣಮುಖರಾಗಿದ್ದಾರೆ. 1,34,218 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಪ್ರಸ್ತುತ 4,38,667 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 42,314 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಸರ್ಕಾರದ ಅಂಕಿ-ಅಂಶಗಳ ಪ್ರಕಾರ, ಒಟ್ಟು ಪ್ರಕರಣಗಳ ಪೈಕಿ ಶೇ.93.76 ಗುಣಮುಖರಾಗಿದ್ದಾರೆ ಮತ್ತು ಶೇ.1.46ರಷ್ಟು ಸಾವು ಸಂಭವಿಸಿದೆ. ಪ್ರಸ್ತುತ ಸಕ್ರಿಯ ಪ್ರಕರಣಗಳ ಪ್ರಮಾಣ ಶೇ.4.78.

ಐಸಿಎಂಆರ್‌ ಪ್ರಕಾರ, ದೇಶದಲ್ಲಿ ಒಟ್ಟು 13,36,82,275 ಗಂಟಲು ದ್ರವ ಮಾದರಿಗಳಿಗೆ ಕೋವಿಡ್‌ -19 ಪರೀಕ್ಷೆ ಮಾಡಲಾಗಿದೆ. ನಿನ್ನೆ ಒಂದೇ ದಿನ 10,99,545 ಮಾದರಿಗಳಿಗೆ ಪರೀಕ್ಷೆ ನಡೆಸಲಾಗಿದೆ.

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: TV5 Kannada
Top