Wednesday, 16 Sep, 5.44 pm ಉದಯವಾಣಿ

ಟಾಪ್ 10 ಸುದ್ದಿ
2 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಆದೇಶ: ಪರಪ್ಪನ ಅಗ್ರಹಾರಕ್ಕೆ ನಟಿ ಸಂಜನಾ ಗಲ್ರಾನಿ

ಬೆಂಗಳೂರು: ಮಾದಕ ದ್ರವ್ಯ ಪೂರೈಕೆ ಮತ್ತು ಸೇವನೆ ಪ್ರಕರಣದಲ್ಲಿ ಬಂಧಿತರಾಗಿರುವ ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾನಿಗೆ 2 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಕೋರ್ಟ್ ಆದೇಶ ನೀಡಿದೆ.

ಸಂಜನಾ ಅವರ ಸಿಸಿಬಿ ಕಸ್ಟಡಿ ಅವಧಿ ಇಂದು ಅಂತ್ಯವಾದ ಹಿನ್ನಲೆಯಲ್ಲಿ ನಟಿಯನ್ನು ಇಂದು ಸಿಸಿಬಿ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವೇಳೆ ನ್ಯಾಯಾಲಯ ಸಂಜನಾ ಅವರನ್ನು 2 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ವಹಿಸಿ ಆದೇಶ ಹೊರಡಿಸಿದೆ.

ಈಗಾಗಲೇ ನಟಿ ರಾಗಿಣಿ ಸೇರಿ 5 ಆರೋಪಿಗಳನ್ನ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿತ್ತು. ಈಗ ಸಂಜನಾ ಎರಡು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಗಾಗಲಿದ್ದಾರೆ.

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Udayavani
Top