Dailyhunt
2nd PUC Result : ಎ.9ರಂದು ಮಧ್ಯಾಹ್ನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಲಭ್ಯ

2nd PUC Result : ಎ.9ರಂದು ಮಧ್ಯಾಹ್ನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಲಭ್ಯ

ಡುಪಿ/ಬೆಂಗಳೂರು: ಈ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಎ.9ರ ಗುರುವಾರ ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರ ಪ್ರಕಟಣೆ ಬುಧವಾರ (ಎ.08) ತಿಳಿಸಿದೆ.

ಫಲಿತಾಂಶವನ್ನು https://karresults.nic.in ಲಿಂಕ್‌ ಮೂಲಕ ಅಥವಾ KarnatakaOne Mobile App ಮೂಲಕವೂ ಪಡೆಯಬಹುದಾಗಿದೆ.

ಅಲ್ಲದೆ, ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸಾಪ್/ಎಸ್‌ಎಂಎಸ್ (SMS) ಮೂಲಕವೂ ಫಲಿತಾಂಶದ ಮಾಹಿತಿಯನ್ನು ಮಂಡಳಿಯಿಂದ ರವಾನಿಸಲಾಗುವುದು ಎಂದು ತಿಳಿಸಲಾಗಿದೆ.

ಈ ವರ್ಷ ಪ್ರಥಮ ಬಾರಿಗೆ ವಿಶೇಷವಾಗಿ ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯನ್ನು (Marks Card) ಡಿಜಿಲಾಕರ್ (DigiLocker) ಮೂಲಕ ಎ.9ರ ಗುರುವಾರ ಮಧ್ಯಾಹ್ನ 3 ಗಂಟೆಗೆ ಲಭ್ಯಗೊಳಿಸಲಾಗುವುದು. https://www.digilocker.gov.in ಅನ್ನು ಬಳಸಿ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಅಂಕಪಟ್ಟಿಯನ್ನು ಡಿಜಿಲಾಕರ್ ನಿಂದ ಡೌನ್ಲೋಡ್ ಮಾಡಿಕೊಳ್ಳವ ಮಾಹಿತಿಗೆ ವಿಡಿಯೋ ಲಿಂಕ್‌- ನಲ್ಲಿ ತಿಳಿದುಕೊಳ್ಳಬಹುದು.

ಫಲಿತಾಂಶ ಪಟ್ಟಿಯನ್ನು ಸಂಬಂಧಿತ ಕಾಲೇಜುಗಳಿಗೆ ಎ.9ರ ಗುರುವಾರ ಮಧ್ಯಾಹ್ನ 3 ಗಂಟೆಗೆ ಲಭ್ಯವಿರಲಿದೆ ಎಂದು ಪ್ರಕಟಣೆ ತಿಳಿಸಿದೆ.

ದ್ವಿತೀಯ ಪಿಯುಸಿ ಫಲಿತಾಂಶದ ಕುರಿತು ಸಂಜೆ 6.15ಕ್ಕೆ ಈ ಕುರಿತು ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Dailyhunt
Disclaimer: This content has not been generated, created or edited by Dailyhunt. Publisher: Udayavani