ಉದಯವಾಣಿ
1.3M Followersನವದೆಹಲಿ: ಶಿಕ್ಷಕಿಯೊಬ್ಬಳು 5 ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳನ್ನು ಕತ್ತರಿಯಿಂದ ಚುಚ್ಚಿ ಬಳಿಕ ಮೊದಲ ಮಹಡಿಯಿಂದ ಎಸೆದ ಬೆಚ್ಚಿ ಬೀಳುವ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ. ಶಿಕ್ಷಕಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಕೇಂದ್ರ ದೆಹಲಿಯ ಮಾಡೆಲ್ ಬಸ್ತಿ ಪ್ರದೇಶದ ಪ್ರಾಥಮಿಕ ವಿದ್ಯಾಲಯದಲ್ಲಿ ನಡೆದ ಘಟನೆಯ ನಂತರ ಭಾರಿ ಜನಸ್ತೋಮ ಜಮಾಯಿಸಿತ್ತು. ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ.
ಗೀತಾ ದೇಶ್ವಾಲ್ ಎಂದು ಗುರುತಿಸಲಾದ ಶಿಕ್ಷಕಿ ಮೊದಲು ಬಾಲಕಿಯನ್ನು ಸಣ್ಣ ಕತ್ತರಿಯಿಂದ ಹೊಡೆದು ನಂತರ ಕಟ್ಟಡದ ಮೊದಲ ಮಹಡಿಯಿಂದ ಎಸೆದಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗಾಯಗೊಂಡಿರುವ ಬಾಲಕಿ ಹಿಂದೂ ರಾವ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಪಾಯದಿಂದ ಪಾರಾಗಿದ್ದಾಳೆ ಎಂದು ತಿಳಿಸಿದ್ದಾರೆ.
ಪ್ರತ್ಯಕ್ಷದರ್ಶಿಯ ಹೇಳಿಕೆಯ ಮೇರೆಗೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 307 ರ ಅಡಿಯಲ್ಲಿ ಕೊಲೆ ಯತ್ನದ ಪ್ರಕರಣವನ್ನು ದಾಖಲಿಸಲಾಗುತ್ತಿದೆ ಎಂದು ಉಪ ಪೊಲೀಸ್ ಆಯುಕ್ತ ಶ್ವೇತಾ ಚೌಹಾಣ್ ಹೇಳಿದ್ದಾರೆ.
ವಿದ್ಯಾರ್ಥಿಯನ್ನು ಹಿಂದೂ ರಾವ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಟಿ ಸ್ಕ್ಯಾನ್ ಸೇರಿದಂತೆ ಎಲ್ಲಾ ಅಗತ್ಯ ಪರೀಕ್ಷೆಗಳನ್ನು ಮಾಡಲಾಗಿದೆ. ಮಗು ಸುರಕ್ಷಿತ ಮತ್ತು ಸ್ಥಿರವಾಗಿದೆ ಮತ್ತು ಉತ್ತಮವಾಗಿ ಪ್ರತಿಕ್ರಿಯಿಸುತ್ತದೆ. ಶಿಕ್ಷಕಿಯನ್ನು ಪೊಲೀಸರು ಬಂಧಿಸಿದ್ದಾರೆ. ಎಂಸಿಡಿ ಕೂಡ ತಕ್ಷಣವೇ ಜಾರಿಗೆ ಬರುವಂತೆ ಅವಳನ್ನು ಅಮಾನತುಗೊಳಿಸಿದೆ. ಇಲಾಖೆಯಿಂದ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಎಂಸಿಡಿ ಹಿರಿಯ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.
Disclaimer
This story is auto-aggregated by a computer program and has not been created or edited by Dailyhunt Publisher: Udayavani