Dailyhunt Logo
  • Light mode
    Follow system
    Dark mode
    • Play Story
    • App Story
ಅರ್ಚಕರ ಎದುರೇ ಗರ್ಭಗುಡಿಗೆ ಪ್ರವೇಶಿಸಿ ದೇವಿಯ ವಿಗ್ರಹ ಧ್ವಂಸಗೊಳಿಸಲು ಯತ್ನಿಸಿದ ವ್ಯಕ್ತಿ

ಅರ್ಚಕರ ಎದುರೇ ಗರ್ಭಗುಡಿಗೆ ಪ್ರವೇಶಿಸಿ ದೇವಿಯ ವಿಗ್ರಹ ಧ್ವಂಸಗೊಳಿಸಲು ಯತ್ನಿಸಿದ ವ್ಯಕ್ತಿ

ಹೈದರಾಬಾದ್: ವ್ಯಕ್ತಿಯೊಬ್ಬ ದೇವಸ್ಥಾನದ ಗರ್ಭಗುಡಿಗೆ ಪ್ರವೇಶಿಸಿ ಅಲ್ಲಿದ್ದ ದೇವಿಯ ವಿಗ್ರಹವನ್ನು ಧ್ವಂಸಗೊಳಿಸಲು ಯತ್ನಿಸಿದ ಆಘಾತಕಾರಿ ಘಟನೆ ಹೈದರಾಬಾದ್‌ನ ದೇವಸ್ಥಾನವೊಂದರಲ್ಲಿ ಶುಕ್ರವಾರ ನಡೆದಿದೆ.

ಈ ಘಟನೆಯು ಹೈದರಾಬಾದ್‌ನ ದಿಲ್ ಸುಖ್‌ನಗರ ಬಸ್ ಡಿಪೋ ಪಕ್ಕದಲ್ಲಿರುವ ಸಂತೋಷಿ ಮಾತಾ ದೇವಾಲಯದಲ್ಲಿ ನಡೆದಿದ್ದು, ಸಿಸಿಟಿವಿ ಕೆಮೆರಾದಲ್ಲಿ ದೃಶ್ಯಾವಳಿಗಳು ಸೆರೆಯಾಗಿವೆ.

ದೇವಸ್ಥಾನದಲ್ಲಿದ್ದ ಭಕ್ತರು ಹಾಗೂ ಸ್ಥಳೀಯರು ದಾಳಿಯನ್ನು ಗಮನಿಸಿ ತಕ್ಷಣವೇ ಮಧ್ಯಪ್ರವೇಶಿಸಿ, ಆರೋಪಿಯನ್ನು ತಡೆದು ಆತನಿಗೆ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಮುಂದಿನ ತನಿಖೆ ಕೈಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಕೃತ್ಯದ ಹಿಂದಿನ ಸನ್ನಿವೇಶಗಳ ಬಗ್ಗೆ ವಿಚಾರಣೆ ಆರಂಭಿಸಿದ್ದಾರೆ.

ಆರೋಪಿಯ ವೈದ್ಯಕೀಯ ತಪಾಸಣೆ ಹಾಗೂ ಮಾನಸಿಕ ಆರೋಗ್ಯ ಪರೀಕ್ಷೆಯನ್ನೂ ಪೊಲೀಸರು ನಡೆಸುತ್ತಿದ್ದಾರೆ. ಸದ್ಯಕ್ಕೆ ದಾಳಿಯ ಹಿಂದಿನ ಉದ್ದೇಶ ಸ್ಪಷ್ಟವಾಗಿಲ್ಲ.

ಈ ಘಟನೆಗೆ ತೆಲಂಗಾಣದ ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿದ್ದು, ರಾಜ್ಯ ಸರ್ಕಾರದ ದೇವಸ್ಥಾನಗಳ ಸುರಕ್ಷತಾ ವ್ಯವಸ್ಥೆಯನ್ನು ಅವರು ಪ್ರಶ್ನಿಸಿದ್ದಾರೆ.

ತೆಲಂಗಾಣ ಬಿಜೆಪಿ ಅಧ್ಯಕ್ಷ ಎನ್. ರಾಮಚಂದರ್ ರಾವ್ ಅವರು ಸರ್ಕಾರವನ್ನು ಟೀಕಿಸಿದ್ದು, ಧಾರ್ಮಿಕ ವಿಚಾರಗಳಲ್ಲಿ ಸರ್ಕಾರದ ಮೃದು ಧೋರಣೆಯು ಇಂತಹ ಘಟನೆಗಳು ನಡೆಯಲು ಕಾರಣವಾಗಿದೆ ಎಂದು ಆರೋಪಿಸಿದ್ದಾರೆ. ಧಾರ್ಮಿಕ ಸಂಸ್ಥೆಗಳ ರಕ್ಷಣೆಯ ಹೊಣೆ ರಾಜ್ಯ ಸರ್ಕಾರದ್ದಾಗಿದ್ದು, ಈ ಕುರಿತು ಹೊಣೆಗಾರಿಕೆಯನ್ನು ವಹಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Udayavani