Monday, 01 Mar, 3.38 pm ಉದಯವಾಣಿ

ಧಾರಾವಾಡ
ಬಾಲವಿಕಾಸ ಅಕಾಡೆಮಿಗೆ ಬಜೆಟ್‌ನಲ್ಲಿ ಹೆಚ್ಚು ಅನುದಾನ

ಧಾರವಾಡ: ಕರ್ನಾಟಕ ಬಾಲ ವಿಕಾಸ ಅಕಾಡೆಮಿಗೆ ಈ ಬಾರಿಯ ಬಜೆಟ್‌ನಲ್ಲಿಹೆಚ್ಚು ಅನುದಾನ ನೀಡುವಂತೆ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರೊಟ್ಟಿಗೆ ಚರ್ಚಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕರ್ನಾಟಕ ಬಾಲವಿಕಾಸ ಅಕಾಡೆಮಿ ಸಹಯೋಗದಲ್ಲಿ ನಗರದ ಡಾ|ಮಲ್ಲಿಕಾರ್ಜುನ ಮನ್ಸೂರ ಕಲಾಭವನದಲ್ಲಿ ಹಮ್ಮಿಕೊಂಡಿದ್ದಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭಉದ್ಘಾಟಿಸಿ ಅವರು ಮಾತನಾಡಿದರು.ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಿ ಬಾಲವಿಕಾಸ ಅಕಾಡೆಮಿ ಪ್ರಶಸ್ತಿ ನೀಡುತ್ತಿರುವುದುಶ್ಲಾಘನೀಯ. ಈ ಕಾರ್ಯವನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ರಾಜ್ಯ ಬಜೆಟ್‌ನಲ್ಲಿಹೆಚ್ಚು ಅನುದಾನ ಬಿಡುಗಡೆಗೊಳಿಸಲು ಪ್ರಯತ್ನಿಸಲಾಗುವುದು ಎಂದರು.

ಬಾಲವಿಕಾಸ ಅಕಾಡೆಮಿ ಹೆಸರೇ ಸೂಚಿಸುವಂತೆ ಮಕ್ಕಳ ವಿಕಾಸವನ್ನುಪ್ರೋತ್ಸಾಹಿಸುವಂತಹದ್ದು. ಮಕ್ಕಳಲ್ಲಿರುವ ಸೂಕ್ತ ಪ್ರತಿಭೆ ಗುರುತಿಸಿ, ಪುರಸ್ಕರಿಸುತ್ತಿರುವುದು ಉಳಿದ ಮಕ್ಕಳಿಗೆ ಸ್ಫೂರ್ತಿದಾಯಕ. ಇನ್ನುಅನೇಕ ಮಕ್ಕಳಿಗೆ ಪ್ರಶಸ್ತಿ ಸಿಗಬೇಕು. 2017-18,18-19ನೇ ಸಾಲಿನ ಅಕಾಡೆಮಿ ಗೌರವ ಹಾಗೂ2017 -18ನೇ ಸಾಲಿನ ಮಕ್ಕಳ ಚಂದಿರ ಪುಸ್ತಕಪ್ರಶಸ್ತಿಯನ್ನು ಈ ವರ್ಷ ಕೊಡಲಾಗುತ್ತಿದೆ.ಇನ್ಮುಂದೆ ಪ್ರತಿವರ್ಷ ಪ್ರಶಸ್ತಿ ನೀಡುವಂತಹ ಕೆಲಸ ಆಗಬೇಕು ಎಂದರು.

ಪುಸ್ತಕ, ಕ್ಯಾಲೆಂಡರ್‌ ಬಿಡುಗಡೆ: ಅಕಾಡೆಮಿಯ ಪರಿಚಯ ಪುಸ್ತಕ ಹಾಗೂ ಕ್ಯಾಲೆಂಡರ್‌ನ್ನು ಸಚಿವೆ ಶಶಿಕಲಾ ಜೊಲ್ಲೆ, ಕರಪತ್ರವನ್ನು ಕರ್ನಾಟಕ ರಾಜ್ಯ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷೆ ಸವಿತಾ ಅಮರಶೆಟ್ಟಿ ಬಿಡುಗಡೆಗೊಳಿಸಿದರು.ಸಮಾರೋಪ ನುಡಿಗಳನ್ನಾಡಿದ ಅಕಾಡೆಮಿ ಅಧ್ಯಕ್ಷ ಈರಣ್ಣ ಜಡಿ, ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸುವ ಉದ್ದೇಶದಿಂದ ಪ್ರತಿ ಜಿಲ್ಲೆಯಲ್ಲಿ ಅಕಾಡೆಮಿ ವತಿಯಿಂದ ವಿವಿಧ ಸ್ಪರ್ಧೆ, ವಿಚಾರ ಸಂಕಿರಣ ಏರ್ಪಡಿಸಲಾಗುವುದು ಎಂದರು.

ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮದ ಅಧ್ಯಕ್ಷ ಸಿದ್ಧನಗೌಡ ಈಶ್ವರಗೌಡ ಚಿಕ್ಕನಗೌಡ್ರು, ಹು-ಧಾ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ನಾಗೇಶ್‌ ಕಲಬುರ್ಗಿ, ಅಕಾಡೆಮಿ ಮಾಜಿ ಅಧ್ಯಕ್ಷ ಶಂಕರ ಹಲಗತ್ತಿ, ಮಹೇಶ ಟೆಂಗಿನಕಾಯಿ,ವೇದವ್ಯಾಸ ಕೌಲಗಿ, ಡಾ|ಕಿಕ್ಕೇರಿ ಕೃಷ್ಣಮೂರ್ತಿ,ರಂಗಾಯಣದ ನಿರ್ದೇಶಕ ರಮೇಶಪರವಿನಾಯ್ಕರ್‌, ಮನೋವೈದ್ಯ ಡಾ|ಆನಂದ ಪಾಂಡುರಂಗಿ, ಮಾಜಿ ಶಾಸಕಿ ಸೀಮಾ ಅಶೋಕ ಮಸೂತಿ, ನಿರ್ಮಲಾ ಯಲಿಗಾರ, ಧಾರವಾಡ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಎ.ಖಾಜಿ, ಯೋಜನಾಧಿಕಾರಿ ಭಾರತಿ ಶೆಟ್ಟರ ಇದ್ದರು.

ಮಕ್ಕಳಲ್ಲಿ ಕೃಷಿ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ 6 ಅಥವಾ 8ನೇ ತರಗತಿಯ ಪಠ್ಯದಲ್ಲಿ ಕೃಷಿಕುರಿತು ಪಾಠ ಅಳವಡಿಸುವಂತೆ ಶಿಕ್ಷಣ ಸಚಿವರಿಗೆ ಪತ್ರ ಬರೆಯುತ್ತೇನೆ. –ಬಸವರಾಜ ಹೊರಟ್ಟಿ, ಸಭಾಪತಿ, ವಿಧಾನ ಪರಿಷತ್‌

ಪಾಲಕರು ಮಕ್ಕಳ ಮೇಲೆ ಒತ್ತಡ ಹೇರದೆ, ಅವರಿಗೆ ಆಸಕ್ತಿ ಇರುವ ಕ್ಷೇತ್ರ, ವಿಷಯಗಳಲ್ಲಿ ಮುಂದುವರಿಯಲು ಪ್ರೋತ್ಸಾಹ ನೀಡಬೇಕು. ಆಗ ಮಾತ್ರ ಮಕ್ಕಳು ಭವಿಷ್ಯದಲ್ಲಿ ಉತ್ತಮ ಪ್ರಜೆಯಾಗಿ, ಸಾಧನೆ ಮಾಡಲು ಸಾಧ್ಯವಿದೆ. ಶಶಿಕಲಾ ಜೊಲ್ಲೆ, ಸಚಿವೆ

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Udayavani
Top