Dailyhunt Logo
  • Light mode
    Follow system
    Dark mode
    • Play Story
    • App Story
ಬೆಳಗಾವಿ: ಜಲಾಶಯದ ನೀರು ಕುಡಿಯುವ ಅಗತ್ಯಕ್ಕೆ ಸದ್ಬಳಕೆಯಾಗಲಿ: ಸಚಿವ ಸತೀಶ್ ಜಾರಕಿಹೊಳಿ ಸೂಚನೆ

ಬೆಳಗಾವಿ: ಜಲಾಶಯದ ನೀರು ಕುಡಿಯುವ ಅಗತ್ಯಕ್ಕೆ ಸದ್ಬಳಕೆಯಾಗಲಿ: ಸಚಿವ ಸತೀಶ್ ಜಾರಕಿಹೊಳಿ ಸೂಚನೆ

ಬೆಳಗಾವಿ: ಪ್ರಸಕ್ತ ಬರ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲೆಯ ಜಲಾಶಯಗಳಲ್ಲಿ ಲಭ್ಯವಿರುವ ನೀರನ್ನು ಕುಡಿಯುವ ನೀರಿನ ಅಗತ್ಯತೆಗಳಿಗೆ ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬೆಳಗಾವಿಯಲ್ಲಿ ನಡೆದ ಘಟಪ್ರಭಾ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿನ ನೀರಿನ ಲಭ್ಯತೆ ಮತ್ತು ಬಳಕೆಯ ಕುರಿತು ಅಧಿಕಾರಿಗಳು ನಿರಂತರವಾಗಿ ನಿಗಾ ವಹಿಸಬೇಕು. ನೀರಾವರಿ ಹಾಗೂ ಕುಡಿಯುವ ನೀರಿನ ಅಗತ್ಯತೆಗಳನ್ನು ಸಮನ್ವಯಗೊಳಿಸಿ, ಲಭ್ಯವಿರುವ ನೀರನ್ನು ಸಮರ್ಪಕವಾಗಿ ನಿರ್ವಹಿಸಲು ಆದ್ಯತೆ ನೀಡಬೇಕು ಎಂದು ಸಚಿವರು ತಿಳಿಸಿದರು.

ಹೆಸ್ಕಾಂ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳು ಸಂಬಂಧಿಸಿದ ಶಾಸಕರೊಂದಿಗೆ ನಿಯಮಿತವಾಗಿ ಸಭೆ ನಡೆಸಬೇಕು. ಆಯಾ ಪ್ರದೇಶಗಳಲ್ಲಿನ ನೀರಿನ ಲಭ್ಯತೆ, ನೀರಾವರಿ ವ್ಯವಸ್ಥೆ ಹಾಗೂ ವಿದ್ಯುತ್ ಪೂರೈಕೆಯ ಪರಿಸ್ಥಿತಿಯ ಕುರಿತು ಸಮಗ್ರ ಮಾಹಿತಿಯನ್ನು ನೀಡಬೇಕು ಎಂದು ಸತೀಶ್ ಜಾರಕಿಹೊಳಿ ಸೂಚಿಸಿದರು.

Dailyhunt
Disclaimer: This content has not been generated, created or edited by Dailyhunt. Publisher: Udayavani