Dailyhunt Logo
  • Light mode
    Follow system
    Dark mode
    • Play Story
    • App Story
ಬೆಂಗಳೂರು: ಕಲ್ಲುಕ್ವಾರಿ ಬಂಡೆಗಳು ಉರುಳಿ ಭೀಕರ ದುರಂತ: 7 ಮಂದಿ ದುರ್ಮರಣ

ಬೆಂಗಳೂರು: ಕಲ್ಲುಕ್ವಾರಿ ಬಂಡೆಗಳು ಉರುಳಿ ಭೀಕರ ದುರಂತ: 7 ಮಂದಿ ದುರ್ಮರಣ

ಬೆಂಗಳೂರು: ನಗರದ ದಕ್ಷಿಣ ಭಾಗದ ಮಾದಪಟ್ಟಣ ಪ್ರದೇಶದಲ್ಲಿ ಕಲ್ಲುಕ್ವಾರಿಯ ಬಂಡೆಗಳು ಉರುಳಿ ಬಿದ್ದ ಪರಿಣಾಮ ಸಂಭವಿಸಿದ ಭೀಕರ ದುರಂತದಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.

ದುರಂತದಲ್ಲಿ ಹಲವರು ಗಾಯಗೊಂಡಿದ್ದು, ಅವರನ್ನು ತತ್ ಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ. ಅವಶೇಷಗಳಡಿ ಇನ್ನೂ ಕೆಲವರು ಸಿಲುಕಿರುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯ ಮುಂದುವರಿದಿದೆ.

ಮೃತರ ಗುರುತು ಹಾಗೂ ಗಾಯಾಳುಗಳ ವಿವರ ಇನ್ನಷ್ಟೇ ತಿಳಿದುಬರಬೇಕಿದ್ದು, ಘಟನೆಯ ನಿಖರ ಕಾರಣದ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಈ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Dailyhunt
Disclaimer: This content has not been generated, created or edited by Dailyhunt. Publisher: Udayavani