Dailyhunt Logo
  • Light mode
    Follow system
    Dark mode
    • Play Story
    • App Story
Bhatkal: ಅನುದಾನಿತ ಶಾಲಾ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ

Bhatkal: ಅನುದಾನಿತ ಶಾಲಾ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ

ಟ್ಕಳ: ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ, ಭಟ್ಕಳ ಶಾಖೆ ವತಿಯಿಂದ ಅನುದಾನಿತ ಶಾಲಾ ನೌಕರರ ಹಾಗೂ ಶಾಲೆಗಳ ಸಮಸ್ಯೆಗಳನ್ನು ಪರಿಹರಿಸುವಂತೆ ಕೋರಿ ತಹಸೀಲ್ದಾರ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

ತಾಲೂಕು ಘಟಕದ ಅಧ್ಯಕ್ಷ ಗಣಪತಿ ಶಿರೂರು ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಿದ ಸಂಘ ಮನವಿಯಲ್ಲಿ ದ್ವಿಭಾಷಾ ಬೋಧನಾ ಪದ್ಧತಿಯಲ್ಲಿ ಆಂಗ್ಲ ಮಾಧ್ಯಮ ಬೋಧಿಸಲು ಪ್ರಾರಂಭಿಸಲು ಅನುಮತಿಯನ್ನು ನೀಡುವುದು.

ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ನೀಡುವ ಎಲ್ಲಾ ಸೌಲಭ್ಯಗಳನ್ನು ಅನುದಾನಿತ ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೂ ವಿಸ್ತರಿಸುವುದು. ಹಿಂದಿನ ಪಿಂಚಣಿ ವ್ಯವಸ್ಥೆಯನ್ನು ಜ್ಯಾರಿಗೆ ತರುವುದು. ಅನುದಾನಿತ ಶಾಲೆಗಳಲ್ಲಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದು ಸೇರಿದಂತೆ ಅನೇಕ ಬೇಡಿಕೆಗಳನ್ನು ಸರಕಾರದ ಮುಂದಿಟ್ಟಿದ್ದಾರೆ.

ಗ್ರಾಮೀಣ ಹಾಗೂ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಶೈಕ್ಷಣಿಕ ಅವಶ್ಯಕತೆಗಳನ್ನು ಪೂರೈಸುತ್ತಾ ಬಂದಿರುವ ಅನುದಾನಿತ ಶಿಕ್ಷಣ ಸಂಸ್ಥೆಗಳ ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ ಪರಿಹರಿಸುವಂತೆಯೂ ಕೋರಲಾಗಿದೆ. ಈ ಸಂದರ್ಭದಲ್ಲಿ ಮಾಧ್ಯಮಿಕ ಶಾಲಾ ನೌಕರರ ಸಂಘದ ಕಾರ್ಯದರ್ಶಿ ಮಹೇಶ ಎಚ್., ಪದಾಧಿಕಾರಿಗಳು, ಮಾಧ್ಯಮಿಕ ಶಾಲಾ ನೌಕರರು ಉಪಸ್ಥಿತರಿದ್ದರು. ತಹಸೀಲ್ದಾ ಅನುಪಸ್ಥಿತಿಯಲ್ಲಿ ಉಪ ತಹಸೀಲ್ದಾರ್ ಪ್ರವೀಣ ಮನವಿಯನ್ನು ಪಡೆದುಕೊಂಡರು.

Dailyhunt
Disclaimer: This content has not been generated, created or edited by Dailyhunt. Publisher: Udayavani