Dailyhunt Logo
  • Light mode
    Follow system
    Dark mode
    • Play Story
    • App Story
Bhatkal: ಪ್ರಚೋದನಕಾರಿ ಭಾಷಣ ಆರೋಪ: ಗೋವಿಂದ ನಾಯ್ಕ ವಿರುದ್ಧ ಪ್ರಕರಣ

Bhatkal: ಪ್ರಚೋದನಕಾರಿ ಭಾಷಣ ಆರೋಪ: ಗೋವಿಂದ ನಾಯ್ಕ ವಿರುದ್ಧ ಪ್ರಕರಣ

ಟ್ಕಳ: ಪೊಲೀಸ್ ಠಾಣೆ ಎದುರು ನಡೆದ ಪ್ರತಿಭಟನೆ ವೇಳೆ ಪ್ರಚೋದನಕಾರಿ ಹಾಗೂ ಅವಾಚ್ಯ ಪದಗಳನ್ನು ಬಳಸಿ ಭಾಷಣ ಮಾಡಿದ್ದ ಆರೋಪದ ಮೇಲೆ ಹಿಂದೂ ಸಂಘಟನೆಯ ಮುಖಂಡ ಗೋವಿಂದ ನಾಯ್ಕ ವಿರುದ್ಧ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಗರ ರಸ್ತೆ ಕಸ ವಿಲೇವಾರಿ ಘಟಕದ ಸಮೀಪ ನಡೆದ ಘಟನೆಯ ಹಿನ್ನೆಲೆಯಲ್ಲಿ ಹಿಂದೂ ಕಾರ್ಯಕರ್ತರಾದ ಶ್ರೀಕಾಂತ ನಾಯ್ಕ ಮತ್ತು ಕುಮಾರ ನಾಯ್ಕ ವಿರುದ್ಧ ಪ್ರಕರಣ ದಾಖಲಾಗಿತ್ತು.

ಈ ಕ್ರಮವನ್ನು ವಿರೋಧಿಸಿ ಕಾರ್ಯಕರ್ತರು ಭಟ್ಕಳ ಶಹರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದರು.

ಪ್ರತಿಭಟನೆಯ ವೇಳೆ ಗೋವಿಂದ ನಾಯ್ಕ ಮಾತನಾಡಿ, ಪೊಲೀಸ್ ಇಲಾಖೆಯ ಕಾರ್ಯವೈಖರಿಯನ್ನು ಟೀಕಿಸುವುದರ ಜೊತೆಗೆ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಹಾಗೂ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಸಾಧ್ಯತೆ ಇರುವ ಹೇಳಿಕೆಗಳನ್ನು ನೀಡಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ.

ಭಾಷಣದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ, ಭಟ್ಕಳದಂತಹ ಸೂಕ್ಷ್ಮ ಪ್ರದೇಶದಲ್ಲಿ ಎರಡು ಸಮುದಾಯಗಳ ನಡುವೆ ಉದ್ವಿಗ್ನ ವಾತಾವರಣ ನಿರ್ಮಾಣವಾಗುವ ಸಾಧ್ಯತೆ ಇದೆ ಎಂದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಈ ಕುರಿತು ಭಟ್ಕಳ ಗ್ರಾಮೀಣ ಠಾಣೆಯ ಪಿಐ ವೆಂಕಟೇಶ ಮುರನಾಳ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Dailyhunt
Disclaimer: This content has not been generated, created or edited by Dailyhunt. Publisher: Udayavani