Dailyhunt
Davanagere: ಜಿಮ್‌ ತರಬೇತುದಾರನಿಂದ ಅತ್ಯಾಚಾರ: ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಗೃಹ ಸಚಿವ

Davanagere: ಜಿಮ್‌ ತರಬೇತುದಾರನಿಂದ ಅತ್ಯಾಚಾರ: ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಗೃಹ ಸಚಿವ

ದಾವಣಗೆರೆ: ಹುಬ್ಬಳ್ಳಿಯ ಜಿಮ್‌ ಟ್ರೈನರ್ ಸಮೀರ್‌ ಎಂಬಾತನ ವಿರುದ್ಧ ಕೇಳಿ ಬಂದಿರುವ ಅತ್ಯಾಚಾರ ಆರೋಪ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಕೂಡಲೇ ವರದಿ ಕೊಡುವಂತೆ ಎಸ್ಪಿಯವರಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದರು.

ಅವರು ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಹುಬ್ಬಳ್ಳಿಗೆ ತೆರಳುತ್ತಿದ್ದೇನೆ. ಅಲ್ಲಿಗೆ ತಲುಪುವಷ್ಟರಲ್ಲಿ ಪ್ರಕರಣದ ಸಮಗ್ರ ವರದಿಯನ್ನು ಸಿದ್ಧಪಡಿಸಿ ನೀಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದ್ದೇನೆ. ಇಂತಹ ಸೂಕ್ಷ್ಮ ಪ್ರಕರಣಗಳಲ್ಲಿ ವಿಳಂಬ ಧೋರಣೆ ಸಹಿಸುವುದಿಲ್ಲ ಎಂದರು.

ಪೊಲೀಸರ ವರದಿ ಪರಿಶೀಲಿಸಿ, ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್‌ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕಾನೂನುಬಾಹೀರ ಕೃತ್ಯ ಎಸಗುವವರು ಯಾರೇ ಆಗಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದರು.

ಅತ್ಯಾಚಾರಕ್ಕೆ ಒಳಗಾಗಿದ್ದಾರೆ ಎನ್ನಲಾದ ಯುವತಿಯನ್ನು ಈಗಾಗಲೇ ರಕ್ಷಿಸಲಾಗಿದೆ. ಜ್ಯೂಸ್‌ನಲ್ಲಿ ಮತ್ತಿನ ಔಷಧ ಬೆರೆಸಿಕೊಟ್ಟು ಅತ್ಯಾಚಾರ ಎಸಗಲಾಗಿದೆ ಎಂಬ ಸಂತ್ರಸ್ತೆಯ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಲು ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು.

Dailyhunt
Disclaimer: This content has not been generated, created or edited by Dailyhunt. Publisher: Udayavani