ದಾವಣಗೆರೆ: ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರಗಳು ಕಾಂಗ್ರೆಸ್ ಪಕ್ಷದ ಕೈಜಾರಿ ಹೋಗುತ್ತಿದ್ದು ಮುಖ್ಯಮಂತ್ರಿಯವರಿಗೆ ನಿದ್ರೆ ಬರುತ್ತಿಲ್ಲ. ಯಾವ ಕ್ಷೇತ್ರದಲ್ಲಿ ಹೆಚ್ಚು ಪ್ರಚಾರದಲ್ಲಿ ತೊಡಗಿಸಿಕೊಳ್ಳಬೇಕೆಂಬ ಗೊಂದಲದಲ್ಲಿ ಮುಖ್ಯಮಂತ್ರಿಗಳು ಇದ್ದಾರೆ ಎಂದು ಬಿ.ವೈ.
ವಿಜಯೇಂದ್ರ ಎ.4ರ ಶನಿವಾರ ದಾವಣಗೆರೆಯಲ್ಲಿ ಮಾತನಾಡಿದರು.
ಭ್ರಷ್ಟಾಚಾರದ ಕುರಿತು ಮಾತನಾಡುವ ನೈತಿಕತೆ ಕಾಂಗ್ರೆಸ್ ಪಕ್ಷ ಮತ್ತು ಮುಖ್ಯಮಂತ್ರಿಗಳಿಗೆ ಇಲ್ಲ. ಏಕೆಂದರೆ ಅವರು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ಲೂಟಿ ಮಾಡಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಮತದಾರರಿಗೆ ದುಡ್ಡು ಹಂಚುತ್ತಿದ್ದಾರೆ. ಭ್ರಷ್ಟಾಚಾರದ ಹಣದಿಂದ ಈ ಕ್ಷೇತ್ರದ ಜನರ ಮತವನ್ನು ಗೆಲ್ಲಲು ಸಾಧ್ಯವಿಲ್ಲ. ಶಾಮನೂರು ಅವರ ನೋಟು, ಬಿಜೆಪಿಗೆ ವೋಟು ಎಂದು ನಮ್ಮ ಕಾರ್ಯಕರ್ತರು ಹೇಳುತ್ತಿದ್ದಾರೆ. ಮತದಾರರು ಈಗಾಗಲೇ ಬಿಜೆಪಿ ಗೆಲ್ಲಿಸುವ ತೀರ್ಮಾನ ಮಾಡಿದ್ದಾರೆ ಎಂದು ಹೇಳಿದರು.
ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳಾಗಿದ್ದಾಗ ಹಿಂದುಳಿದ ವರ್ಗಗಳ ವಿವಿಧ ನಿಗಮಗಳಿಗೆ 550 ಕೋಟಿ ರೂಪಾಯಿ ನೀಡಿದ್ದರು. ಸಿದ್ದರಾಮಯ್ಯನವರ ಸರಕಾರ ಕೇವಲ 200- 250ಕೋಟಿಯನ್ನಷ್ಟೇ ಕೊಟ್ಟಿದೆ. ಹಿಂದುಳಿದ ವರ್ಗಗಳನ್ನು ಮತಬ್ಯಾಂಕಾಗಿ ಕಾಂಗ್ರೆಸ್ ಬಳಸಿಕೊಳ್ಳುತ್ತಿದೆ ಎಂದರು.

