Dailyhunt Logo
  • Light mode
    Follow system
    Dark mode
    • Play Story
    • App Story
ಧಾರವಾಡ: ಮಗುವಿನ ಎದುರೆ ಪತ್ನಿಯನ್ನು ಕೊಂದು ಪತಿ ನೇಣಿಗೆ ಶರಣು

ಧಾರವಾಡ: ಮಗುವಿನ ಎದುರೆ ಪತ್ನಿಯನ್ನು ಕೊಂದು ಪತಿ ನೇಣಿಗೆ ಶರಣು

ಧಾರವಾಡ: ಪತ್ನಿಯನ್ನು ಕೊಂದು ಪತಿ ತಾನೂ ನೇಣಿಗೆ ಶರಣಾದ ಘಟನೆ ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಮೌಲಾಸಾಬ್ (28) ಎಂಬಾತನೇ ತನ್ನ ಪತ್ನಿ ಸಲ್ಮಾ (21) ಎಂಬಾಕೆಯನ್ನು ಕೊಲೆ ಮಾಡಿ ಕೊನೆಗೆ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ತನ್ನ ಒಂದೂವರೆ ವರ್ಷದ ಮಗುವಿನ ಎದುರೇ ಮೌಲಾಸಾಬ್ ಕೃತ್ಯ ಎಸಗಿದ್ದಾನೆ. ಕಳೆದ ಮೂರು ವರ್ಷಗಳ ಹಿಂದಷ್ಟೇ ಇವರ ವಿವಾಹವಾಗಿತ್ತು ಎಂದು ತಿಳಿದುಬಂದಿದೆ.

ತಡರಾತ್ರಿವರೆಗೂ ಮನೆಯಿಂದ ಯಾವುದೇ ಶಬ್ದ ಬಾರದೇ ಇದ್ದುದ್ದರಿಂದ ವೃದ್ಧೆಯೊಬ್ಬರು ಬಂದು ನೋಡಿದಾಗ ಈ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ.

ಕೊಲೆಯಾದ ಸಲ್ಮಾ ಮನೆಯವರು ಗರಗ ಗ್ರಾಮಕ್ಕೆ ಬರುತ್ತಿದ್ದಂತೆಯೇ ಎರಡೂ ಕುಟುಂಬಗಳ ಮಧ್ಯೆ ಗಲಾಟೆ ಸಂಭವಿಸಿದೆ. ಎರಡೂ ಕುಟುಂಬದವರು ಪರಸ್ಪರ ಹೊಡೆದಾಟಕ್ಕೆ ಮುಂದಾಗಿದ್ದಾರೆ. ಅತ್ತೆ, ಮಾವನ ಕಾಟ ಸಲ್ಮಾಳಿಗೆ ಇತ್ತು. ಈ ಕಾಟಕ್ಕೆ ತನ್ನ ಮಗಳನ್ನೇ ಬಲಿ ಪಡೆದುಕೊಂಡಿದ್ದಾರೆ. ಅಳಿಯನ ಕಾಟ ಏನೂ ಇರಲಿಲ್ಲ. ಕೂಲಿ ಮಾಡುತ್ತಿದ್ದ ಆತನಿಗೆ ನಾವೇ ಸಹಾಯ ಮಾಡುತ್ತಿದ್ದೆವು. ನನ್ನ ಮಗಳು ಸಣ್ಣವಳು. ಆಕೆಯಲ್ಲಿ ಚುರುಕುತನ ಇರಲಿಲ್ಲ ಎಂದು ಸಲ್ಮಾ ತಾಯಿ ಹೇಳಿದ್ದಾರೆ.

ಘಟನೆ ನಡೆದ ತತ್ ಕ್ಷಣ ಸ್ಥಳಕ್ಕೆ ಎಸ್‌ಪಿ ಗುಂಜನ್ ಆರ್ಯ ಸಹ ಭೇಟಿ ನೀಡಿದ್ದಾರೆ. ಸದ್ಯ ಶವಗಳನ್ನು ಧಾರವಾಡ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ. ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.



Dailyhunt
Disclaimer: This content has not been generated, created or edited by Dailyhunt. Publisher: Udayavani