Dailyhunt
ಏಪ್ರಿಲ್ 18 ರಂದು ಸಿಎಂ ಜೊತೆ ನಡೆಯಬೇಕಿದ್ದ ಸರ್ವಪಕ್ಷ ಸಭೆ ಮುಂದೂಡಿಕೆ!

ಏಪ್ರಿಲ್ 18 ರಂದು ಸಿಎಂ ಜೊತೆ ನಡೆಯಬೇಕಿದ್ದ ಸರ್ವಪಕ್ಷ ಸಭೆ ಮುಂದೂಡಿಕೆ!

ಬೆಂಗಳೂರು : ಏಪ್ರಿಲ್ 18 ರಂದು ಸಿಎಂ ಯಡಿಯೂರಪ್ಪ ಕರೆದಿದ್ದ ಸರ್ವ ಪಕ್ಷ ಸಭೆಯನ್ನು ಮುಂದೂಡಿಕೆ ಮಾಡಲಾಗಿದೆ. ವಿಧಾನಸೌಧದಲ್ಲಿ ಏಪ್ರಿಲ್ 18 ಸಂಜೆ 4 ಗಂಟೆಗೆ ಸಭೆಯನ್ನು ಆಯೋಜನೆ ಮಾಡಲಾಗಿತ್ತು.

ಕೋವಿಡ್ ನಿಯಂತ್ರಣ ಸಂಬಂಧ ಎಲ್ಲಾ ಪಕ್ಷದ ಮುಖಂಡರ ಜೊತೆ ಸಲಹೆ ಪಡೆಯುವ ಉದ್ದೇಶದಿಂದ ಸಿಎಂ ಸಭೆ ಕರೆದಿದ್ದರು. ಸಭೆಯಲ್ಲಿ ಸಿದ್ದರಾಮಯ್ಯ, ಕುಮಾರಸ್ವಾಮಿ, ಡಿಕೆ ಶಿವಕುಮಾರ್ ಸೇರಿದಂತೆ ಹಲವು ಮುಖಂಡರು ಭಾಗಿಯಾಗುತ್ತಾರೆ ಎಂದು ಹೇಳಲಾಗಿತ್ತು. ಇದೀಗ ಸಭೆಯನ್ನು ದಿಢೀರ್ ಮುಂದೂಡಿಕೆ ಮಾಡಲಾಗಿದ್ದು, ಯಾವ ಕಾರಣಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂಬ ಚರ್ಚೆ ಶುರುವಾಗಿದೆ.

ಸದ್ಯ ಮುಂದಿನ ಸಭೆ ಯಾವಾಗ ನಡೆಯಲಿದೆ ಎಂದು ಹೇಳದೇ ಸರ್ವ ಪಕ್ಷ ಸಭೆಯನ್ನು ಮುಂದೂಡಿಕೆ ಮಾಡಲಾಗಿದೆ. ಇತ್ತ ಸಿಎಂ ಯಡಿಯೂರಪ್ಪ ಅವರಿಗೆ ಅನಾರೋಗ್ಯ ನಿಮಿತ್ತ ಸಭೆಯನ್ನು ಮುಂದೂಡಿಕೆ ಮಾಡಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

Dailyhunt
Disclaimer: This content has not been generated, created or edited by Dailyhunt. Publisher: Udayavani