ಬೆಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಅಪರಾಧಿಯೊಬ್ಬನಿಗೆ 2 ವರ್ಷ ಕಾರಾಗೃಹ ಶಿಕ್ಷೆ ಹಾಗೂ 20 ಸಾವಿರ ರೂ. ದಂಡ ವಿಧಿಸಿ ನ್ಯಾಯಾಲಯವು ಆದೇಶ ಹೊರಡಿಸಿದೆ. ಆಂಧ್ರಪ್ರದೇಶದ ಚಿತ್ತೂರಿನ ಟಿ.ಕುಮಾರ್(55) ಶಿಕ್ಷೆಗೆ ಗುರಿಯಾದ ವ್ಯಕ್ತಿ.
2022ರ ಆ.7ರಂದು ನ್ಯೂ ಬಿಇಎಲ್ ರಸ್ತೆಯ 2ನೇ ಕ್ರಾಸ್‌ನಲ್ಲಿರುವ ಬೇಕರಿ ಎದುರು ಬ್ಯಾಗ್‌ನಲ್ಲಿ ತಂದಿದ್ದ ಗಾಂಜಾವನ್ನು ಕುಮಾರ್‌ಮಾರಾಟ ಮಾಡುತ್ತಿದ್ದ.
ಖಚಿತ ಮಾಹಿತಿ ಆಧರಿಸಿ ಸಂಜಯನಗರ ಠಾಣೆಯ ಪೊಲೀಸರು ಕುಮಾರ್ ನನ್ನು ಬಂಧಿಸಿದ್ದರು. ಎನ್‌ಡಿಪಿಎಸ್ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲವು ಅಪರಾಧಿಗೆ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿದೆ.

