ಮಂಗಳೂರು: ಬಸ್ ಮತ್ತು ಕಂಟೇನರ್ ಲಾರಿ ನಡುವೆ ಢಿಕ್ಕಿ ಸಂಭವಿಸಿ ಹಲವರು ಗಾಯಗೊಂಡ ಘಟನೆ ಗುರುಪುರ ಕೈಕಂಬದ ಹೆದ್ದಾರಿಯ ತಿರುವಿನಲ್ಲಿ ಬುಧವಾರ ಸಂಭವಿಸಿದೆ.
ಮಂಗಳೂರಿನಿಂದ ಮೂಡುಬಿದಿರೆಗೆ ತೆರಳುತ್ತಿದ್ದ ಖಾಸಗಿ ಎಕ್ಸ್ ಪ್ರೆಸ್ ಮತ್ತು ಲಾರಿ ತಿರುವಿನಲ್ಲಿ ಮುಖಾಮುಖಿ ಢಿಕ್ಕಿಯಾಗಿವೆ.
ಇಬ್ಬರು ಚಾಲಕರು ತೀವ್ರ ಗಾಯಗೊಂಡಿದ್ದಾರೆ. ಬಸ್ ನಲ್ಲಿದ್ದ ಸುಮಾರು 5ಕ್ಕೂ ಅಧಿಕ ಮಂದಿ ಪ್ರಯಾಣಿಕರಿಗೆ ಗಾಯಗಳಾಗಿವೆ.
ಢಿಕ್ಕಿಯ ರಭಸಕ್ಕೆ ಬಸ್ ಮತ್ತು ಲಾರಿಯ ಮುಂಭಾಗ ನಜ್ಜುಗುಜ್ಜಾಗಿದ್ದು ಲಾರಿಯಲ್ಲಿ ಸಿಲುಕಿಕೊಂಡಿದ್ದ ಅದರ ಚಾಲಕನನ್ನು ಸ್ಥಳೀಯ ಯುವಕರು ಸಹಿತ ಸಾರ್ವಜನಿಕರು ಹಲವು ಸಮಯಗಳ ಕಾಲ ಹರಸಾಹಸಪಟ್ಟು ಹೊರತೆಗೆದರು.

