Dailyhunt Logo
  • Light mode
    Follow system
    Dark mode
    • Play Story
    • App Story
ಹಾಸನ: ಹೋರಾಟಗಾರ ಪುನೀತ್ ಕೆರೆಹಳ್ಳಿ ಬಂಧನ

ಹಾಸನ: ಹೋರಾಟಗಾರ ಪುನೀತ್ ಕೆರೆಹಳ್ಳಿ ಬಂಧನ

ಲೂರು (ಹಾಸನ): ಮುಸ್ಲಿಂ ಧರ್ಮಗುರುಗಳಿಗೆ ಅವಮಾನ ಆರೋಪದ ಮೇಲೆ ಹಿಂದೂಪರ ಹೋರಾಟಗಾರ ಪುನೀತ್ ಕೆರೆಹಳ್ಳಿ ಅವರನ್ನು ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಪೊಲೀಸರು ಶುಕ್ರವಾರ ಬೆಳಗ್ಗೆ ಆಲೂರು ತಾಲೂಕಿನ ಕೆರೆಹಳ್ಳಿ ಗ್ರಾಮದಲ್ಲಿ ಬಂಧಿಸಿದ್ದಾರೆ.

ಕಳೆದ ಕೆಲ ದಿನಗಳ ಹಿಂದೆ ಮುಸ್ಲಿಂ ಧರ್ಮಗುರುಗಳಿಗೆ ಅವಮಾನ ಮಾಡಿದ್ದಾರೆ ಎಂದು ಅಬ್ದುಲ್ ರಜಾಕ್ ಎಂಬವರು ಪುನೀತ್ ಕೆರೆಹಳ್ಳಿ ವಿರುದ್ಧ ದೂರು ಸಲ್ಲಿಸಿದ್ದರು.ಈ ದೂರಿನ ಆಧಾರದ ಮೇಲೆ, ಆಲೂರು ತಾಲೂಕಿನ ಕೆರೆಹಳ್ಳಿ ಗ್ರಾಮದಲ್ಲಿರುವ ಪುನೀತ್ ಅವರ ಮನೆಯಲ್ಲಿ ಬಂಧಿಸಿದ್ದಾರೆ.

ಬಂಧನದ ವೇಳೆ ಪುನೀತ್ ಮಾತನಾಡಿ,ನಾನು ಈಗಾಗಲೇ ಅಬ್ದುಲ್ ರಜಾಕ್ ಅವರ ವಿರುದ್ಧ ದೂರು ನೀಡಿದ್ದೆ, ಪೊಲೀಸ್ ಅವನನ್ನು ಬಂಧಿಸದೆ ನನ್ನನ್ನು ಬಂಧಿಸುತ್ತಿರುವುದು ಯಾವ ನ್ಯಾಯ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Dailyhunt
Disclaimer: This content has not been generated, created or edited by Dailyhunt. Publisher: Udayavani