Dailyhunt
Haveri: ಬೊಮ್ಮಾಯಿ ಸೇರಿ ಮೂವರಿಗೆ ಗೌರವ ಡಾಕ್ಟರೆಟ್‌

Haveri: ಬೊಮ್ಮಾಯಿ ಸೇರಿ ಮೂವರಿಗೆ ಗೌರವ ಡಾಕ್ಟರೆಟ್‌

ಹಾವೇರಿ: ಸ್ಥಳೀಯ ಕೆರಿಮತ್ತಿಹಳ್ಳಿಯಲ್ಲಿರುವ ಹಾವೇರಿ ವಿಶ್ವವಿದ್ಯಾಲಯದ ಮೊದಲ ಘಟಿಕೋತ್ಸವ ನಿಮಿತ್ತ ಶಿಕ್ಷಣ ಕ್ಷೇತ್ರದಿಂದ ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ, ಸಾಮಾಜಿಕ ಸೇವೆ ಕ್ಷೇತ್ರದಿಂದ ಸಂಸದ ಬಸವರಾಜ ಬೊಮ್ಮಾಯಿ, ಸಾಹಿತ್ಯ ಕ್ಷೇತ್ರದಿಂದ ಬಂಡಾಯ ಸಾಹಿತಿ ಸತೀಶ ಕುಲಕರ್ಣಿ ಅವರನ್ನು ಗೌರವ ಡಾಕ್ಟರೆಟ್‌ಗೆ ಆಯ್ಕೆ ಮಾಡಲಾಗಿದೆ.

ಎ.6ರಂದು ನಡೆಯುವ ಘಟಿಕೋತ್ಸವದಲ್ಲಿ ಪ್ರದಾನ ಮಾಡಲಾಗುವುದು ಎಂದು ವಿವಿ ಕುಲಪತಿ ಪ್ರೊ| ಸುರೇಶ ಜಂಗಮಶೆಟ್ಟಿ ತಿಳಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Udayavani