ಹುಬ್ಬಳ್ಳಿ: ವಿದ್ಯಾನಗರ ಬನಶಂಕರಿ ಬಡಾವಣೆಯ ಸಿದ್ದೇಶ್ವರ ಪಾರ್ಕ್ ಬಳಿ ವ್ಯಕ್ತಿಯೊಬ್ಬನನ್ನು ನಡುರಸ್ತೆಯಲ್ಲೇ ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಘಟನೆ ಶುಕ್ರವಾರ ನಡೆದಿದೆ. ಹತ್ಯೆಗೀಡಾದ ವ್ಯಕ್ತಿ ದಾದಾಪೀರ್ ಎಂದು ತಿಳಿದು ಬಂದಿದೆ.
ಮೂವರು ದುಷ್ಕರ್ಮಿಗಳು ರಸ್ತೆಯಲ್ಲಿ ಬೈಕ್ ಸವಾರನನ್ನು ಅಡ್ಡಗಟ್ಟಿ ಏಕಾಏಕಿ ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಹತ್ಯೆಗೈದು ಕ್ಷಣಾರ್ಧದಲ್ಲಿ ಪರಾರಿಯಾಗಿದ್ದಾರೆ.
ಸ್ಥಳಕ್ಕೆ ಮಹಾನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಹಾಗೂ ಹಿರಿಯ ಅಧಿಕಾರಿಗಳು ಮತ್ತು ವಿದ್ಯಾನಗರ ಪೊಲೀಸರು ಭೇಟಿ ನೀಡಿ ಸಿಸಿಟಿವಿ ಕ್ಯಾಮರಾಗಳನ್ನು ಪರಿಶೀಲಿಸುತ್ತಿದ್ದಾರೆ.
ದುಷ್ಕರ್ಮಿಗಳ ಬಗ್ಗೆ ಪೊಲೀಸ್ ತಂಡಗಳು ಮಾಹಿತಿ ಕಲೆ ಹಾಕುತ್ತಿದ್ದು, ಹೆಚ್ಚಿನ ವಿವರ ಇನ್ನಷ್ಟೇ ತಿಳಿದು ಬರಬೇಕಿದೆ.

