Dailyhunt Logo
  • Light mode
    Follow system
    Dark mode
    • Play Story
    • App Story
ಜೇಮ್ಸ್ ಸಿನಿಮಾ ಶೂಟಿಂಗ್ ಸ್ಥಳದಲ್ಲಿ ಕೋವಿಡ್ ಜಾಗೃತಿ ಮೂಡಿಸಿದ ಪವರ್ ಸ್ಟಾರ್

ಜೇಮ್ಸ್ ಸಿನಿಮಾ ಶೂಟಿಂಗ್ ಸ್ಥಳದಲ್ಲಿ ಕೋವಿಡ್ ಜಾಗೃತಿ ಮೂಡಿಸಿದ ಪವರ್ ಸ್ಟಾರ್

ಗಂಗಾವತಿ: ವಿಶ್ವವನ್ನು ಕಾಡುತ್ತಿರುವ ಕೋವಿಡ್ ರೋಗದ ಹರಡುವಿಕೆಯನ್ನು ತಡೆಗಟ್ಟಲು ಪ್ರತಿಯೊಬ್ಬರೂ ಮಾಸ್ಕ್ ಧರಿಸುವಂತೆ ಖ್ಯಾತ ಚಿತ್ರನಟ ಪವರ್ ಸ್ಟಾರ್ ಪುನೀತರಾಜಕುಮಾರ್ ಜಾಗೃತಿ ಮೂಡಿಸಿದರು. ಅವರು ತಾಲೂಕಿನ ಮಲ್ಲಾಪೂರ ವಾಣೀಭದ್ರೇಶ್ವರ ಬೆಟ್ಟದಲ್ಲಿ ಜೇಮ್ಸ್ ಸಿನಿಮಾ ಶೂಟಿಂಗ್ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಆಯೋಜಿಸಿದ್ದ ಕೋವಿಡ್ ಜನಜಾಗೃತಿ ಅಭಿಯಾನದಲ್ಲಿ ಪಾಲ್ಗೊಂಡು ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು. ದಿನ ನಿತ್ಯದ ಕೆಲಸಗಳ ಜತೆಗೆ ಸಾರ್ವಜನಿಕರು ಜಾಗೃತಿಯಿಂದ ಮಾಸ್ಕ್ ಧರಿಸಬೇಕು. ಸ್ಯಾನಿಟೈಜರ್ ಬಳಕೆ ಸಾಮಾಜಿಕ ಅಂತರ ಕಾಪಾಡಬೇಕು. ಹೆಚ್ಚು ಜನ‌ ಗುಂಪು ಕೂಡಬಾರದು ಕೊರೊನಾ ರೋಗದ ಬಗ್ಗೆ ನಿರ್ಲಕ್ಷ್ಯ ಮಾಡದೇ ಆರೋಗ್ಯ ಸಂರಕ್ಷಣೆ ಮಾಡಿಕೊಳ್ಳುವಂತೆ ಮನವಿ ಮಾಡಿದರು.

Dailyhunt
Disclaimer: This content has not been generated, created or edited by Dailyhunt. Publisher: Udayavani