Sunday, 09 May, 5.45 pm ಉದಯವಾಣಿ

ಟಾಪ್ 40 ಸುದ್ದಿ
ಕೆ.ಬಿ. ಶಾಣಪ್ಪ ನಿಧನಕ್ಕೆ ಡಿಸಿಎಂ ಗೋವಿಂದ ಕಾರಜೋಳ ಸಂತಾಪ

ಬೆಂಗಳೂರು : ಮಾಜಿ ಸಚಿವ ಕೆ.ಬಿ. ಶಾಣಪ್ಪ ಅವರ ನಿಧನಕ್ಕೆ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಶಾಣಪ್ಪ ಅವರು ಸರಳ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿದವರಾಗಿದ್ದು, ಹಿರಿಯ ರಾಜಕೀಯ‌ ಮುತ್ಸದ್ಧಿಯಾಗಿದ್ದರು. ಅವರು ಕಾರ್ಮಿಕ ದುರೀಣರಾಗಿ,‌ಮೊದಲು ಕಮ್ಯುನಿಸ್ಟ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾದರು. ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿ, ಸಚಿವರಾಗಿ, ರಾಜ್ಯಸಭಾ ಸದಸ್ಯರಾಗಿ ಅಪಾರವಾಗಿ ಜನಸೇವೆ ಮಾಡಿದ ಧೀಮಂತ ನಾಯಕರಾಗಿದ್ದಾರೆ. ಸಂಘಟನಾ ಚತುರರಾಗಿದ್ದರು. ವಾಗ್ಮಿಗಳಾಗಿದ್ದರು. ಅವರ ಅಗಲಿಕೆಯಿಂದ ದುಡಿಯುವ ವರ್ಗಕ್ಕೆ, ರಾಜಕೀಯ ಕ್ಷೇತ್ರಕ್ಕೆ, ಈ ಪ್ರದೇಶಕ್ಕೆ ಅಪಾರ ನಷ್ಟ ಉಂಟಾಗಿದೆ. ಅವರ ಕುಟುಂಬ ವರ್ಗದವರು, ಅನುಯಾಯಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ.

ಅವರ ಆತ್ಮಕ್ಕೆ ಚಿರಶಾಂತಿ ನೀಡಿ, ಅವರ ಕುಟುಂಬ ವರ್ಗದವರಿಗೆ ಹಾಗೂ ಅನುಯಾಯಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಡಿಸಿಎಂ ಪ್ರಾರ್ಥಿಸಿದ್ದಾರೆ.

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Udayavani
Top