Dailyhunt Logo
  • Light mode
    Follow system
    Dark mode
    • Play Story
    • App Story
ಕೆಇಎ: ಎ.ಇ. ಪರೀಕ್ಷೆಗೆ 35% ಅಭ್ಯರ್ಥಿಗಳು ಹಾಜರು

ಕೆಇಎ: ಎ.ಇ. ಪರೀಕ್ಷೆಗೆ 35% ಅಭ್ಯರ್ಥಿಗಳು ಹಾಜರು

ಬೆಂಗಳೂರು: ಕೆಎಸ್‌ಎಸ್‌ಐಡಿಸಿ, ಕೃಷಿ ಮಾರಾಟ ಇಲಾಖೆ ಮತ್ತು ಬೆಂಗಳೂರು ಜಲಮಂಡಳಿಯ ವಿವಿಧ ವಿಭಾಗಗಳ ಸಹಾಯಕ ಎಂಜಿನಿಯರ್ ಹುದ್ದೆಗಳ ಭರ್ತಿಗೆ ಕಲ್ಯಾಣ ಕರ್ನಾಟಕೇತರ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಲಿಖಿತ ಪರೀಕ್ಷೆಯಲ್ಲಿ ಶೇ. 35 ಮಂದಿ ಹಾಜರಾಗಿದ್ದಾರೆ.

ಒಟ್ಟು 16,420 ಅಭ್ಯರ್ಥಿಗಳ ಪೈಕಿ ಬೆಳಗಿನ ಪರೀಕ್ಷೆಗೆ 5,721 ಹಾಗೂ ಮಧ್ಯಾಹ್ನದ ಪರೀಕ್ಷೆಗೆ 5,669 ಅಭ್ಯರ್ಥಿಗಳು ಹಾಜರಾಗಿದ್ದರೆಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ಬೆಂಗಳೂರಿನ 22 , ಹುಬ್ಬಳ್ಳಿ ಮತ್ತು ಕಲ್ಬುರ್ಗಿಯ ತಲಾ 6 ಕೇಂದ್ರಗಳಲ್ಲಿ ಯಶಸ್ವಿಯಾಗಿ ಪರೀಕ್ಷೆ ನಡೆಯಿತು. ಪರೀಕ್ಷೆ ಬಳಿಕ ಓಎಂಆರ್ ಪ್ರತಿಗಳನ್ನು ಕೆಇಎ ವೆಬ್ ಸೈಟ್‌ನಲ್ಲಿ ಅಪ್ಲೋಡ್ ಮಾಡಲಾಯಿತು ಎಂದಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Udayavani