ಕಿನ್ನಿಗೋಳಿ: 18 ವರ್ಷಗಳಿಂದ ಕಿನ್ನಿಗೋಳಿಯ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಪುಂಜಾಲಕಟ್ಟೆ ರಮೇಶ್ ಪೂಜಾರಿ (40) ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ. ಅವರು ಇಲ್ಲಿ ಬೇಕರಿಗೆ ಸಂಬಂಧಿಸಿದ ಕೊಠಡಿಯಲ್ಲೇ ವಾಸವಿದ್ದರು.
ಸೋಮವಾರ ಬೆಳಗ್ಗೆ ಕೆಲಸಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಸಹೋದ್ಯೋಗಿಗಳು ಹುಡುಕಾಟ ನಡೆಸಿದಾಗ ಬಾವಿಯ ಸಮೀಪ ಅವರ ಪಾದರಕ್ಷೆಗಳು ಪತ್ತೆಯಾಗಿದ್ದು ಅನುಮಾನಗೊಂಡು ಬಾವಿಯಲ್ಲಿ ಪರಿಶೀಲಿಸಿದಾಗ ಮೃತದೇಹ ಪತ್ತೆಯಾಯಿತು.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.

